3 ತಿಂಗಳುಗಳ ವೇತನಗಳ ಮೊತ್ತ 634 ಕೋಟಿ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. avintvcom

ಮನವಿಗೆ ಸ್ಪಂದಿಸಿದ ಸಿಎಂ
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ 3 ತಿಂಗಳುಗಳ ವೇತನಗಳ ಮೊತ್ತ 634 ಕೋಟಿ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು,
ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಅಕ್ಟೋಬರ್, ನವಂಬರ್ ಹಾಗೂ ಡಿಸೇಂಬರ್ ಈ 3 ತಿಂಗಳುಗಳ ಸಂಬಳದ ಒಟ್ಟು ಮೊತ್ತವಾದ 634 ಕೋಟಿ 50 ಲಕ್ಷ ರೂ. ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದರಿಂದಾಗಿ ಸಾರಿಗೆ ಸಿಬ್ಬಂದಿಗಳ ಒಟ್ಟು ಮೂರು ತಿಂಗಳುಗಳ ಶೇಕಡ 75 ರಷ್ಟು ವೇತನದ ಮೊತ್ತ 634.50 ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಕ್ರಮ ಕೈಗೊಂಡಂತಾಗಿದೆ. ಉಳಿದ ಶೇಕಡ 25 ರಷ್ಟು ವೇತನಗಳನ್ನು ಸಾರಿಗೆ ಸಂಸ್ಥೆಗಳೇ ತಮ್ಮ ಸಂಪನ್ಮೂಲಗಳಿಂದ ಭರಿಸಲಿವೆ.
ಇದರಿಂದಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸುಮಾರು 1,30,000 ಸಿಬ್ಬಂದಿಗಳಿಗೆ ವೇತನ ಪಾವತಿಗೆ ಸಾಧ್ಯವಾದಂತಾಗಿದೆ.
ಕೋವಿಡ್ ನಂತರದಲ್ಲೂ ಸಾರಿಗೆ ಸಂಸ್ಥೆಗಳ ಆದಾಯ ಶೇಕಡ 30 ರಷ್ಟನ್ನು ಮೀರದಿರುವುದರಿಂದ ಸಾರಿಗೆ ಸಂಸ್ಥೆಗಳ ಸಂಪನ್ಮೂಲಕ್ಕೆ ತೀವ್ರನಷ್ಟ ಉಂಟಾಗಿದ್ದರಿಂದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅವರ ಮನವೊಲಿಸಲಾಯಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ವೇತನ ಪಾವತಿಗೆ ಕ್ರಮಕೈಗೊಂಡ ಮುಖ್ಯಮಂತ್ರಿಯವರ ಕ್ರಮಕ್ಕೆ ಸಾರಿಗೆ ಸಂಸ್ಥೆಗಳ ಪರವಾಗಿ ಕೃತಜ್ಞತೆಗಳು.
ಈ ಸಂದರ್ಭದಲ್ಲಿ ಸಚಿವರಾದ ವಿ.ಸೋಮಣ್ಣ ಬಿ.ಸಿ. ಪಾಟೀಲ್, ಎನ್ ಡಬ್ಲ್ಯೂ ಕೆ ಆರ್ ಟಿ ಸಿ ನಿಗಮದ ಅಧ್ಯಕ್ಷರಾದ ವಿ.ಎಸ್. ಪಾಟೀಲ್, ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಚಂದ್ರಪ್ಪ ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ರಾಜಕುಮಾರ್ ಪಾಟೀಲ್ ಉಪಸ್ಥಿತರಿದ್ದರು