ಬಿಜೆಪಿ ಘಟಕದ ಕಾರ್ಯಕಾರಿಣಿ ಸಭೆಯು 7ನೇಬಡಾವಣೆಯ ಸ್ವಸ್ತಿಕ್ ಸಂಸ್ಕ್ರತಿ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತುavintvcom
ಆತ್ಮೀಯರೇ,
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಕಾರ್ಯಕಾರಿಣಿ ಸಭೆಯು ನಿನ್ನೆಯ ದಿನ (18/11/2020) ಜಯನಗರ 7 ನೇ ಬಡಾವಣೆಯ ಸ್ವಸ್ತಿಕ್ ಸಂಸ್ಕ್ರತಿ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಎನ್.ಆರ್.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ , ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ. ತೇಜಸ್ವಿನಿ ಅನಂತಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಅಶ್ವಥ್ ನಾರಾಯಣ್, ಬೆಂ. ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಪ್ರಭಾರಿಗಳಾಗಿರುವ ಶಾಸಕ ಸಂಜೀವ್ ಮಟಂದೂರು ಮತ್ತು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ದಶರಥ್ ಅವರು ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲ 13 ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
– ಎನ್.ಆರ್.ರಮೇಶ್,
ಅಧ್ಯಕ್ಷರು,
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ.