ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ನಾಲ್ವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ #avintvcom

ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ನಾಲ್ವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ
ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಕಾರ್ಯದಲ್ಲಿ ಗಣನೀಯ ಸಾಧನೆ ಮಾಡಿ ಜಿಲ್ಲೆಯ ನಾಲ್ವರು ಮುಖ್ಯಮಂತ್ರಿಗಳ ಪದಕಗಳಿಗೆ ಭಾಜನರಾಗಿದ್ದಾರೆ.
ಉಪ ವಲಯ ಅರಣ್ಯಾಧಿಕಾರಿಗಳಾದ ಎಮ್.ಡಿ. ಲಮಾಣಿ, ಲಕ್ಷ್ಮಣ ಕಟ್ಟಿಮನಿ ,ಅರಣ್ಯ ರಕ್ಷಕರಾದ ಉಮೇಶ ಕಡಿ ಮತ್ತು ಗಿರಿಧರ್ ಅಗರ್ವಾಲೆಯವರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿ,ಗೌರವಿಸಿದರು. ಧಾರವಾಡ ಅರಣ್ಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಸಾಧನೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಹಾಗೂ ಮತ್ತಿತರರು ಅಧಿಕಾರಿಗಳು ,ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.