ಬಜರಂಗದಳ ನಗರ ಸಹ ಸಂಚಾಲಕರಾದ ನಾಗೇಶ್ ಗೌಡ ರಾಂಬೊ ಇವರ ದುಷ್ಕರ್ಮಿಗಳಿಂದ ಮಾರಣಾಂತಿಕವಾದ ಹಲ್ಲೆ #avintvcom

ಬಜರಂಗದಳ ನಗರ ಸಹ ಸಂಚಾಲಕರಾದ ನಾಗೇಶ್ ಗೌಡ ರಾಂಬೊ ಇವರ ಮೇಲೆ ಇಂದು ಬೆಳಗ್ಗೆ ದುಷ್ಕರ್ಮಿಗಳಿಂದ ಮಾರಣಾಂತಿಕವಾದ ಹಲ್ಲೆ ಆಗಿದೆ.
ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..
ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ಮುಂಜಾನೆ ನಡೆದಿದೆ.
ಹಲ್ಲೆಗೊಳಗಾದ ಭಜರಂಗದಳದ ಕಾರ್ಯಕರ್ತನನ್ನು ನಾಗೇಶ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ನಾಗೇಶ್ ನನ್ನು ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿವಾದಾತ್ಮಕ ಗೋಡೆ ಬರಹ ಪ್ರಕರಣ: ಓರ್ವನ ವಿಚಾರಣೆ
ಬಿಗುವಿನ ವಾತಾವರಣ: ಘಟನೆಯ ಬಳಿಕ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಸಂಸದ ಬಿವೈ ರಾಘವೇಂದ್ರ ಅವರು ಮೆಟ್ರೋ ಆಸ್ಪತ್ರೆಗೆ ತೆರಳಿ ನಾಗೇಶ್ ಆರೋಗ್ಯ ವಿಚಾರಿಸಿದರು