ಮಾನ್ಯ ಜಲ ಸಂಪನ್ಮೂಲ ಸಚಿವರಾದ ಸನ್ಮಾನ್ಯ ಶ್ರೀ ರಮೇಶ್_ಜಾರಕಿಹೊಳಿ ಅವರನ್ನುನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿ, ಪ್ರಾಧಿಕಾರಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ

, ಮಾನ್ಯ ಜಲ ಸಂಪನ್ಮೂಲ ಸಚಿವರಾದ ಸನ್ಮಾನ್ಯ ಶ್ರೀ #ರಮೇಶ್_ಜಾರಕಿಹೊಳಿ ಅವರನ್ನು
ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿ, ಪ್ರಾಧಿಕಾರಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ ಸಂದರ್ಭ.
ಭೇಟಿಯ ಸಮಯದಲ್ಲಿ ಸಚಿವರನ್ನು ಕುರಿತು ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರೂಪಿಸಿರುವ ಸುಮಾರು 400 ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ ರೈತರಿಂದ ಬಂದಂತಹ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು.
ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಮಾನ್ಯ ಸಚಿವರು, ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಹಾಗೂ ಕೂಡಲೇ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.