ಸಾರಿಗೆ ನೌಕರರ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ತನ್ನ ಬೆಂಬಲ ವ್ಯಕ್ತಪಡಿಸಿದೆ. ಪಾರ್ಕ್ ನಲ್ಲಿ ಪ್ರತಿಭಟನೆ #avintvcom

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷ ತನ್ನ ಬೆಂಬಲ ವ್ಯಕ್ತಪಡಿಸಿದೆ. ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾರಿಗೆ ನೌಕರರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂಧರ್ಭದಲ್ಲಿ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ಹಾಗೂ ಉಪಾಧ್ಯಕ್ಷರಾದ ಸುರೇಶ್ ರಾಥೋಡ್ ಸೇರಿದಂತೆ ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದು ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.