ಪೌರಕಾರ್ಮಿಕರಿಗೆ ಉಚಿತ ಮನೆ ಭರವಸೆಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ : ಸಚಿವ ಬಸವರಾಜ್ #avintvcom

ಪಾಲಿಕೆ, ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ; ಪೌರಕಾರ್ಮಿಕರಿಗೆ ಉಚಿತ ಮನೆ ಭರವಸೆ
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಸಚಿವ ಬಸವರಾಜ್
ಬೆಳಗಾವಿ 07 ( ಕರ್ನಾಟಕ ವಾರ್ತೆ):ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ್ ಅವರು ಗುರುವಾರ (ಜ.7) ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಹಾನಗರ ಪಾಲಿಕೆಯ ವಾಣಿಜ್ಯ ಕಟ್ಟಡಗಳ ಕಾಮಗಾರಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇನ್ನೂ ಎರಡು ತಿಂಗಳುಗಳಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿಗಳು ಸಂಪೂರ್ಣ ಗೊಳ್ಳುತ್ತಿದ್ದು ಅರ್ಹ ಫಲಾನಭವಿಗಳ ಆಯ್ಕೆ ಮಾಡಿ ಮಳೆಗೆಗಳನ್ನು ನೀಡಲಾಗುವುದು ಎಂದರು.
ನಗರದಲ್ಲಿರುವ ಪೌರಕಾರ್ಮಿಕರಿಗೆ ಉಚಿತವಾಗಿ ಮನೆಗಳು ನೀಡುವುದಾಗಿ ಹೇಳಿದರು. ಮೊದಲನೇ ಹಂತದಲ್ಲಿ 48 ಮನೆಗಳ ನಿರ್ಮಾಣ ಮಾಡುತಿದ್ದು, 2ನೇ ಹಂತದಲ್ಲಿ ಸುಮಾರು 158 ಮನೆಗಳ ನಿರ್ಮಾಣ ಮಾಡಲಾಗುವುದು. ಅದಕ್ಕೆ ಟೆಂಡರ್ ಕೂಡ ಕರೆಯಲಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಆ ಕಾಮಗಾರಿಗಳನ್ನು ಆರಂಭ ಮಾಡಲಿದ್ದೇವೆ ಎಂದು ಅವರು ಹೇಳಿದರು.
ಬೆಳಗಾವಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೂಡ ವೀಕ್ಷಿಸಿ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಎಲ್ಲೆಲ್ಲಿ ಸಮಸ್ಯೆಗಳಾಗಿವೆ. ಎಲ್ಲವನ್ನೂ ವೀಕ್ಷಿಸಿ ಸಮಾಲೋಚನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗುವುದು.
ಈಗಾಗಲೇ ಆರಂಭಿಸಲಾಗಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಸವರಾಜ್ ಅವರು ಸೂಚನೆ ನೀಡಿದರು.
ಮುಖ್ಯಮಂತ್ರಿಗಳು 125 ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದಾರೆ ಅದರನ್ವಯ ಎಲ್ಲಾ ರಸ್ತೆಗಳ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಶುಕ್ರವಾರ(ಜ.8) ನಡೆಯಲಿರುವ ಸಭೆಯಲ್ಲಿ ಸ್ಮಾರ್ಟ ಸಿಟಿ ಯೋಜನೆ ಸೇರಿದಂತೆ ನಗರದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.