AVIN TV

Latest Online Breaking News

ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ನೀಡಲು ಅರ್ಜಿ ಅಹ್ವಾನ #avintvcom

Featured Video Play Icon

ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ

ಹೊಲಿಗೆ ಯಂತ್ರ ನೀಡಲು ಅರ್ಜಿ ಅಹ್ವಾನ

ಧಾರವಾಡ (ಕರ್ನಾಟಕ ವಾರ್ತೆ) ಜ.08: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2020-21 ನೇ ಸಾಲಿನಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿರುವ ಶ್ರವಣದೋಷವುಳ್ಳ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಜನವರಿ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಆಯಾ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ), ತಾಲೂಕಾ ಪಂಚಾಯತ ಇವರಲ್ಲಿ ಸಲ್ಲಿಸಬೇಕು.

ಅರ್ಜಿ ಫಾರಂ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಗಳಾದ ಧಾರವಾಡ-9742757903, ಹುಬ್ಬಳ್ಳಿ-9164347001, ಕಲಘಟಗಿ-6363695794 ನವಲಗುಂದ-9663271200 ಮತ್ತು ಕುಂದಗೋಳ-8880570833 ಹಾಗೂ ಕಛೇರಿ ದೂರವಾಣಿ ಸಂಖ್ಯೆ:0836-2744474 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಡೆಯೂರು ಸಿದ್ಧಲಿಂಗೇಶ್ವರ ಸಂಸ್ಕøತ ಪಾಠಶಾಲೆಗೆ ಉಚಿತ ಪ್ರವೇಶ

ಧಾರವಾಡ (ಕರ್ನಾಟಕ ವಾರ್ತೆ) ಜ.08: ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಸಂಸ್ಕøತ, ವೇದ, ಜ್ಯೋತಿಷ್ಯ, ವೀರಶೈವಾಗಮ ಪಾಠಶಾಲೆಯ 2020-21ನೇ ಸಾಲಿನ ಶೈಕ್ಷಣಿಕ ತರಬೇತಿಗಳಿಗೆ ಉಚಿತ ಪ್ರವೇಶ ಪ್ರಾರಂಭವಾಗಿದೆ. ಉಚಿತವಾಗಿ ಊಟ ಮತ್ತು ವಸತಿ ಕಲ್ಪಿಸಲಾಗುವುದು. ಆಸಕ್ತರು ಸಂಸ್ಥೆಯ ಮುಖ್ಯೋಪಾಧ್ಯಾಯರನ್ನು 9449926809, 9844295188, 9731110045 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗರಗದಲ್ಲಿ ಕೋವಿಡ್ ಲಸಿಕೆ ಪ್ರಯೋಗ ಅಣಕು ಪ್ರದರ್ಶನ

ಧಾರವಾಡ (ಕರ್ನಾಟಕ ವಾರ್ತೆ) ಜ.08: ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಅಮೃತ ದೇಸಾಯಿ ಅವರು ಕೋವಿಡ್ ಲಸಿಕೆ ಪ್ರಯೋಗ ತಾಲೀಮು ವೀಕ್ಷಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ತಾಲೂಕು ಆರೋಗ್ಯಾಧಿಕಾರಿ ಡಾ.ತನುಜಾ, ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ,ವೈದ್ಯಾಧಿಕಾರಿ ಡಾ.ಪತ್ತಾರ ಮತ್ತಿತರರು ಇದ್ದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

March 2021
M T W T F S S
1234567
891011121314
15161718192021
22232425262728
293031  
error: Content is protected !!