ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ವಿದ್ಯಾರ್ಥಿ ಪರಿಷತ್ ನಿಂದ ಮಡಿಕೇರಿಯಲ್ಲಿ ಬೃಹತ್ ತಿರಂಗಾ ಯಾತ್ರೆ #avintvcom

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಮಡಿಕೇರಿಯಲ್ಲಿ ಬೃಹತ್ ತಿರಂಗಾ ಯಾತ್ರೆ
ಕೊಡಗು: ವೀರಸನ್ಯಾಸಿ ಸ್ವಾಮಿ ವಿವೇಕಾನಂದರ 158 ನೇ ಜಯಂತಿಯ ಪ್ರಯುಕ್ತ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಡಿಕೇರಿ ನಗರದ ಸರಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಕೊಡವ ಸಮಾಜದ ಸಭಾ ವೇದಿಕೆಯ ತನಕ 400 ಮೀಟರ್ ಉದ್ದದ ಬೃಹತ್ ತಿರಂಗಯಾತ್ರೆಯ ಮೂಲಕ ವಿವೇಕಾನಂದರ ಸಂದೇಶಗಳನ್ನು ಸಾರಿದರು.
ವಿವಿಧ ಕಾಲೇಜಿನ ವಿದ್ಯಾರ್ಥಿಗಳು,ಎಬಿವಿಪ ಕಾರ್ಯಕರ್ತರು ಬೃಹತ್ ಮೆರವಣಿಗೆ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿವೀಕನಂದರ ಸಂದೇಶ ಸಾರುತ್ತಾ,ಜಯಘೋಷದೊಂದಿಗೆ ತಿರಂಗಯಾತ್ರೆ ನಡೆಸಿದರು. ನಂತರ ನಗರದ ಕೊಡವ ಸಮಾಜದ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಬಿವಿಪಿ ಮಂಗಳೂರು ವಿಭಾಗ ಪ್ರಮುಖರಾದ ಶ್ರಿ ಕೇಶವ ಬಂಗೇರರವರು ಉದ್ಘಾಟಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನಾಡಿದ ಎಬಿವಿಪಿ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರೇಶ್ ಅಜ್ಜಣ್ಣನವರ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ವಿಚಾರಧಾರೆ ಹಾಗೂ ವಿವೇಕಾನಂದರ ಕನಸಿನ ಭಾರತದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.