AVIN TV

Latest Online Breaking News

ಕಾಂಗ್ರೆಸ್ ಗೆ ಹೆಚ್ಚಿನ ಬೆಂಬಲವನ್ನು ನೀಡಿ ಪಂಚಾಯಿತಿಯನ್ನು ಕಾಂಗ್ರೆಸ್ ವಶಕ್ಕೆ ಪಡೆಯಲಾಯಿತು. #avintvcom

Featured Video Play Icon

ಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ಎತ್ತಿದ “ಕೈ”

 

ತಲಕಾಯಲಬೆಟ್ಟ ಗ್ರಾಮಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶುಭಾ ವತಿ ಹಾಗೂ ಉಪಾಧ್ಯಕ್ಷರಾಗಿ ಅಶ್ವತ್ಥನಾರಾಯಣ ರೆಡ್ಡಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮಪಂಚಾಯತಿಯ 14 ಜನ ಸದಸ್ಯರಿದ್ದು ಇದರಲ್ಲಿ ಗುರುವಾರದಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಬೆಂಬಲವನ್ನು ನೀಡಿ ಪಂಚಾಯಿತಿಯನ್ನು ಕಾಂಗ್ರೆಸ್ ವಶಕ್ಕೆ ಪಡೆಯಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶ್ವಥ್ ನಾರಾಯಣ ರೆಡ್ಡಿ ಅವರು ಮಾತನಾಡಿ ನಾವೆಲ್ಲ ಸದಸ್ಯರು ಒಮ್ಮತದಿಂದ ಕೂಡ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಗೊಂದಲಗಳು ಇಲ್ಲದಂತೆ ಸಹಕರಿಸಿಕೊಂಡು ಗ್ರಾಮ ಪಂಚಾಯಿತಿಯ ಹಳ್ಳಿಗಳ ಅಭಿವೃದ್ಧಿಗಾಗಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತೇವೆಂದು ಹೇಳಿದರು ಅದೇ ರೀತಿ ಹಾಲಿ ಸದಸ್ಯರಾದ ಎಂಪಿ ರವಿ ರವರು ಮಾತನಾಡಿ ಈ ಒಂದು ಪಂಚಾಯಿತಿಯು ಕಾಂಗ್ರೆಸ್ ಸದಸ್ಯರು ಬೆಂಬಲದಿಂದ ಕೂಡಿದ್ದು ಮುಂದಿನ ದಿನಗಳಲ್ಲಿ ನಮ್ಮ ನಾಯಕರಾದ ವಿ ಮುನಿಯಪ್ಪ ರವರ ಅಭಿಪ್ರಾಯದಂತೆ ಒಳ್ಳೆಯ ಕಾರ್ಯಗಳನ್ನು ಮಾಡಿಕೊಂಡು ಹೋಗುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಡಿ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಡಿಎಸ್ ರಾಜಣ್ಣ ದಿಬ್ಬೂರಹಳ್ಳಿ ನಾರಾಯಣರೆಡ್ಡಿ ಡಿ ಪ್ರಸನ್ನಕುಮಾರ್, ಕೆ ಆನಂದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಿಮ್ಮನಾಯಕನಹಳ್ಳಿ ಇವರುಗಳು ಹಾಜರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

लाइव कैलेंडर

February 2021
M T W T F S S
1234567
891011121314
15161718192021
22232425262728
error: Content is protected !!