day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ನಿಪ್ಪಾಣಿಯಲ್ಲಿ ನಡೆದ ಮಹಿಳಾ ಸಾಂಸ್ಕೃತಿಕ ಉತ್ಸವ.ತಪ್ಪದೇ ವೀಕ್ಷಿಸಿ.#avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ನಿಪ್ಪಾಣಿಯಲ್ಲಿ ನಡೆದ ಮಹಿಳಾ ಸಾಂಸ್ಕೃತಿಕ ಉತ್ಸವ.ತಪ್ಪದೇ ವೀಕ್ಷಿಸಿ.#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ನಿಪ್ಪಾಣಿ “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ” ನಿಪ್ಪಾಣಿ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ, ನಗರಸಭೆ ಸಹಯೋಗದಲ್ಲಿ ಆಯೋಜಿಸಿದ್ದ, ಮಹಿಳಾ ಸಾಂಸ್ಕೃತಿಕ ಉತ್ಸವಕ್ಕೆ ತೆರಳಿದಾಗ, ಮಹಿಳಾಮಣಿಯರು ನನ್ನನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ನಿಪ್ಪಾಣಿ ಸಮಾಧಿ ಮಠದ ಶ್ರೀ ಪ್ರಾಣಲಿಂಗ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಮಾರಂಭವನ್ನು ಉದ್ಘಾಟಿಸಿ, ಡೋಲು ಭಾರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿ, ಮಾತನಾಡಿದರು. ಇದೇ ಸುಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕಿಯರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಮಹಿಳೆಯರು ಇಂದು ಎಲ್ಲ ರಂಗಗಳಲ್ಲಿಯೂ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ. ದೌರ್ಬಲ್ಯಗಳನ್ನು ಬದಿಗಿಟ್ಟು ಸಕಾರಾತ್ಮಕ ಮನೋಭಾವದಿಂದ ಮುನ್ನಡೆಯಬೇಕು. ‘ಪುರುಷರು ಮಹಿಳೆಯರನ್ನು ಹಾಗೂ ಮಹಿಳೆಯರು ಪುರುಷರನ್ನು ಪರಸ್ಪರ ಗೌರವಿಸುತ್ತ ಸರಿಸಮಾನವಾಗಿ ಕಂಡಾಗ, ಸದೃಢ ಸಮಾಜ ರೂಪುಗೊಳ್ಳುತ್ತದೆ. ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ ಎಂಬುದು ಹೆಮ್ಮೆಯ ಸಂಗತಿ. ಸರ್ವ ರಂಗಗಳಲ್ಲೂ ಮಿಂಚುತ್ತಿರುವ ಸ್ತ್ರೀ ಶಕ್ತಿ ವಿಶ್ವದ ಶಕ್ತಿಯಾಗಿ ಹೊರಹೊಮ್ಮುವತ್ತ ನಾವೆಲ್ಲರೂ ಹೆಜ್ಜೆ ಹಾಕೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ವಿದ್ಯಾವತಿ ಭಜಂತ್ರಿ, ತಾಲೂಕು ವೈದ್ಯಾಧಿಕಾರಿಗಳಾದ ಡಾ. ವಿಠ್ಠಲ ಶಿಂಧೆ, ಸಿಡಿಪಿಓ ಶ್ರೀಮತಿ ಸುಮಿತ್ರಾ ಡಿ.ಬಿ, ಸಿಪಿಐ ಶ್ರೀ ಗುರುನಾಥ, ಪೌರಾಯುಕ್ತರಾದ ಶ್ರೀ ಮಹಾವೀರ ಬೋರನ್ನವರ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. www.avintv.com ಅನುಭವಿ ಸುದ್ದಿ ವರದಿಗಾರರು ಬೇಕಾಗಿದ್ದಾರೆ

 

 

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author