ಮಹಿಳೆಯರ ಅವಗಣನೆಯಿಂದ ರಾಷ್ಟ್ರದ ಏಳಿಗೆ ಸಾಧ್ಯವಿಲ್ಲ.
1 min read
ಮಹಿಳೆಯರ ಅವಗಣನೆಯಿಂದ ರಾಷ್ಟ್ರದ ಏಳಿಗೆ ಸಾಧ್ಯವಿಲ್ಲ.
ಚಿಕ್ಕಮಗಳೂರು: ಸ್ವಾಮಿ ವಿವೇಕಾನಂದರ ಮಾತಿನಂತೆ, ಸಮಾಜದಲ್ಲಿ ಮಹಿಳೆಯರ ಕಡಗಣನೆಯಿಂದ ರಾಷ್ಟ್ರವನ್ನು ಮೇಲೆತ್ತಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಹಿತಕ್ಕಾಗಿ, ಸರ್ವತೋಮುಖ ಅಭಿವೃದ್ಧಿ ಮಹಿಳೆಯರು ಸಮಾಜದಲ್ಲಿ ಮುಂದೆ ಬರಲು ಪುರುಷರು ಸ್ವಾತಂತ್ರ್ಯ ಹಾಗೂ ಪೂರಕ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ಚಿಕ್ಕಮಗಳೂರು ವಿಧಾನ ಸಭೆ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ, ಇವರು ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಮಾತನಾಡಿ, ಈ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಶೋಷಣೆ ತಪ್ಪಿದ್ದಲ್ಲ. ಆಧುನಿಕ ಹೆಣ್ಣು ಮಕ್ಕಳು ಸಹ ನಾನಾ ರೀತಿಯ ಮಾನಸಿಕ ಶೋಷಣೆಗೆ ಒಳಗಾಗುತ್ತಿದ್ದಾರೆ. ಪ್ರತಿ ಹೆಣ್ಣು ಮಕ್ಕಳು ವಿದ್ಯಾವಂತರಾಗಿ, ವೈಚಾರಿಕವಾಗಿ ಬೆಳೆಯಬೇಕು ಆಗ ಹೆಣ್ಣು ಸ್ವತಂತ್ರ್ಯವಾಗಿ ಸಬಲೆಯಾಗಬಲ್ಲಳು, ಸಮಾನತೆಯ ಜೊತೆಗೆ ಒಗ್ಗಟ್ಟಿನಲ್ಲಿ ಸಹ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ. ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳೆಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ಸಾಧನೆಗೆ ಮನಃಪೂರ್ವಕ ಗೌರವ ಸೂಚಿಸುವ ದಿನ ಇದಾಗಿದೆ. ಇಂದು ಮಹಿಳೆಯರ ಸಾಧನೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇದೆ. ಎಂದು ಹೇಳಿ ದರು.
ಮಾಜಿ ಸಚಿವ ಮೊಟ್ಟಮ್ಮ ಮಾತನಾಡಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿರುತ್ತದೆ. ಆಕೆ ತಾಯಿಯಾಗಿ, ಪತ್ನಿಯಾಗಿ ಸೋದರಿಯಾಗಿ, ಬೆಳಕಾಗುತ್ತಾಳೆ. ಬಾಳಿಗೆ ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಎಂದರು. ನಿಭಾಯಿಸುತ್ತಾಳೆ
ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ.ಹೆಚ್.ಎಸ್. ಕೀರ್ತಾನ ಮಾತನಾಡಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳೆಯರ ಸಾಧನೆಗಳನ್ನು ಗುರುತಿಸಲು, ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ವಾರ್ಷಿಕವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಮಹಾಂತೇಶ್ ಭಜಂತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಜಿ. ಪಂ ಉಪ ಕಾರ್ಯದರ್ಶಿ ಶಂಕರ್ ಕೊರವರ. ಡಯಟ್ ಉಪನಿರ್ದೆಶಕಿ ಕೆ.ಎಂ. ಸುನೀತಾ, ಜಂಟಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಉಪನಿರ್ದೆಶಕಿ ಪೂರ್ಣಿಮಾ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರು ನಾಗರತ್ನ, ಹೋಮ್ ಗಾರ್ಡ್ ಅಧಿಕಾರಿ ನಜೀಮ್ ತಾಜ್, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಎಲ್ಲಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕರು, ಎಲ್ಲಾ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರು, ಮತ್ತು ಹಲವಾರು ಸಂಘ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು.