ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ
1 min read
ಕಡೂರು: ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿ ಬೋವಿ ಕಾಲೊನಿ ಗ್ರಾಮದಲ್ಲಿ ನಡೆದಿದೆ.
ವರ್ಷಿಣಿ ಮೃತ ವಿದ್ಯಾರ್ಥಿನಿ. ಬಾಣಾವರದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ, 9 ನೇ ತರಗತಿಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದು ಶುಂಠಿಗೆಂದು ತಂದಿದ್ದ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಳಿ ಬದುಕಬೇಕಾಗಿದ್ದ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ತಿಳಿಯುತ್ತಿದ್ದಂತೆಯೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದಿದ್ದಂತೆ ಸಹಪಾಠಿಗಳು ಶಾಲೆಯ ಶಿಕ್ಷಕರು ಕಣ್ಣೀರು ಹಾಕಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ದೂರ ಮಾಡಲು ಸರ್ಕಾರ ಕಾರ್ಯಗಾರದ ಜೊತೆಗೆ ಸಹಾಯವಾಣಿಗಳನ್ನು ತೆರೆದರೂ ವಿದ್ಯಾರ್ಥಿಗಳು ಪರೀಕ್ಷಾ ಭಯಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಕೂಡ ಆರಂಭಗೊಳ್ಳುತ್ತಿದ್ದು ಪೋಷಕರು ಮಕ್ಕಳಲ್ಲಿ ಧೈರ್ಯ ತುಂಬಿ ಪರೀಕ್ಷೆಯನ್ನು ಎದುರಿಸುವಂತೆ ಆತ್ಮಸ್ಥೆರ್ಯವನ್ನು ಹೆಚ್ಚಿಸಿದಲ್ಲಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದಾಗಿದೆ.