“ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆ : ಸಾರ್ವತ್ರಿಕ ರಜೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಉಡುಪಿ ಶಾಸಕ ಮನವಿ.”
1 min read
ಹಿಂದೂಗಳ ಶ್ರದ್ಧಾಕೇಂದ್ರವಾದ 500 ವರ್ಷಗಳ ಕನಸು ನನಸಾಗುವ,ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆಯ ಶ್ರೀರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಆ ಪವಿತ್ರ ದಿನವನ್ನು ದೇಶಾದ್ಯಂತ ದೀಪಾವಳಿ ಹಬ್ಬದಂತೆ ಸಂಭ್ರಮದಿಂದ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ರಾಜ್ಯದ ಜನತೆಗೆ ಅದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

