लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕಲಾಕೇಸರಿ ಉದಯ್ ಕುಮಾರ್ ಅವರ ಜನುಮದಿನದ ಸವಿನೆನಪಿನಲ್ಲಿ 🌻🙏🎂💐

1 min read

ಕಲಾಕೇಸರಿ ಉದಯ್ ಕುಮಾರ್ ಅವರ ಜನುಮದಿನದ ಸವಿನೆನಪಿನಲ್ಲಿ 🌻🙏🎂💐
‘ರತ್ನಗಿರಿ ರಹಸ್ಯ’ ಚಿತ್ರದ ಟಾರ್ಜಾನ್ ಮಾದರಿಯ ಪಾತ್ರ ಉದಯ್ ಕುಮಾರ್ ಅವರಿಗೆ ಅಪಾರ ಜನಪ್ರಿಯತೆ ತಂದಿತು. ಅಂದಿನ ದಿನಗಳಲ್ಲಿ ಕನ್ನಡ ಚಲನಚಿತ್ರರಂಗದಲ್ಲಿನ ಜನಪ್ರಿಯತೆಯ ಜೊತೆಗೆ ತಮಿಳು, ತೆಲುಗು ಮತ್ತು ಹಲವು ಹಿಂದಿ ಚಲನಚಿತ್ರಗಳಲ್ಲೂ ಅಭಿನಯಿಸಿ ಎಲ್ಲೆಡೆ ಜನಪ್ರಿಯರಾಗಿದ್ದರು. ಉದಯ್ ಕುಮಾರ್ ನಟಿಸಿದ್ದ ಚಿತ್ರಗಳ ಸಂಖ್ಯೆ ಇನ್ನೂರಕ್ಕೂ ಹೆಚ್ಚಿನದು. “ಭಾಗ್ಯೋದಯ” ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ (ಸೂರ್ಯ ನಾರಾಯಣ ಶಾಸ್ತ್ರಿ) ಉದಯಕುಮಾರ್ ಅವರು ರತ್ನಗಿರಿ ರಹಸ್ಯ, ಚಂದವಳ್ಳಿಯ ತೋಟ, ವೀರಕೇಸರಿ, ಬೆಟ್ಟದ ಹುಲಿ, ಚಂದ್ರಕುಮಾರ, ವಿಜಯನಗರದ ವೀರಪುತ್ರ, ಶ್ರೀ ರಾಮಾಂಜನೇಯ ಯುದ್ಧ, ಸರ್ವಜ್ಞ, ಸ್ಕೂಲ್ ಮಾಸ್ಟರ್, ಮಿಸ್ ಲೀಲಾವತಿ, ಮಧುಮಾಲತಿ, ಸತ್ಯ ಹರಿಶ್ಚಂದ್ರ, ತ್ರಿವೇಣಿ, ಕಲಾವತಿ, ಹೇಮಾವತಿ ಮುಂತಾದವು ಅವರ ನೆನಪಿಗೆ ಬರುವ ಹಲವು ಚಿತ್ರಗಳು. ಚಲನಚಿತ್ರರಂಗದ ಏಳು ಬೀಳುಗಳಲ್ಲಿ ಈ ಪ್ರಖ್ಯಾತ ನಾಯಕನಟ, ಪೋಷಕನಟ, ಖಳನಟ ಹೀಗೆ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ ಉದಯ್ ಕುಮಾರ್ ತಮ್ಮ ಅಭಿನಯದಲ್ಲಿದ್ದ ತನ್ಮಯತೆಯಿಂದ ಚಿತ್ರಪ್ರೇಮಿಗಳ ಕಣ್ಮಣಿಯಾಗಿದ್ದರು. ಅದರಲ್ಲೂ ಬಿರುಸು ಮಾತಿನ ನಿಷ್ಟುರವಾದಿ ಪಾತ್ರಗಳಿಗೆ ಅವರಂತಹ ಕಲಾವಿದ ಅಪರೂಪ ಎಂದರೂ ಸರಿಯೇ. ವಿಶ್ವಾಮಿತ್ರನ ಪಾತ್ರಧಾರಿಯಾಗಿ ಅವರು ನಟಿಸಿದ್ದ ‘ಸತ್ಯ ಹರಿಶ್ಚಂದ್ರ’ದ ಪಾತ್ರ ಅವಿಸ್ಮರಣೀಯವಾದದ್ದು. ‘ಸಂಧ್ಯಾರಾಗ’ ಚಿತ್ರದಲ್ಲಿ ರಾಜ್ ಕುಮಾರ್ ಅಣ್ಣನಾಗಿ ನಿಷ್ಠುರಗುಣದ ವ್ಯಕ್ತಿಯಾಗಿ ನಟಿಸಿದ ಅವರ ಪಾತ್ರ ಕೂಡ ಮನಸ್ಸಿನಲ್ಲಿ ಉಳಿಯುವಂತದ್ದು. ‘ರಾಮಾಂಜನೇಯ ಯುದ್ಧ’ ಚಿತ್ರದಲ್ಲಿ ಹನುಮನ ಪ್ರಾಣ ಹಾಡಿನಲ್ಲಿ ಚಿತ್ರಣ ಮುಗಿದ ಎಷ್ಟೋ ಸಮಯವಾದರೂ ಅವರು ತಮ್ಮ ಪಾತ್ರದಲ್ಲಿ ಪೂರ್ಣ ತನ್ಮಯರಾಗಿಬಿಟ್ಟಿದ್ದರೆಂದು ಅಂದಿನ ದಿನಗಳಲ್ಲಿ ಡಾ. ರಾಜ್ ಕುಮಾರ್ ಅವರು ಸ್ಮರಿಸುತ್ತಿದ್ದರು. ಮುಂದೆ ‘ಹೇಮಾವತಿ’ ಚಿತ್ರದಲ್ಲಿನ ಪ್ರಧಾನ ಪಾತ್ರ ಮತ್ತು “ಬಿಳಿ ಹೆಂಡ್ತಿ ” ಚಿತ್ರದ ಸಣ್ಣ ಪೋಷಕ ಪಾತ್ರಗಳಲ್ಲಿ ಅವರು ನೀಡಿದ ಅಮೋಘ ಅಭಿನಯ ಅಮರವಾದದ್ದು..
“ಸೇಡಿಗೆ ಸೇಡು ” ಇವರ ನೂರನೆಯ ಚಿತ್ರ. “ವರ್ಣಚಕ್ರ” ಇವರ ಕೊನೆಯ ಚಿತ್ರ. ತಮ್ಮ 53 ವರ್ಷಗಳ ನಟನಾ ಜೀವನದಲ್ಲಿ, ಉದಯಕುಮಾರ್ ಸುಮಾರು 153 ಕನ್ನಡ ಚಿತ್ರಗಳಲ್ಲೂ, 15 ತೆಲುಗು, 2 ತಮಿಳು ಹಾಗೂ 1 ಹಿಂದಿ ಚಿತ್ರದಲ್ಲಿ ಅಭಿನಯಿಸಿದ್ದರು. ರಾಜ್ ಕುಮಾರ್ ಜೊತೆಯೇ 32 ಚಿತ್ರಗಳಲ್ಲಿ ನಟಿಸಿದ್ದರು. “ಚಂದ್ರಕುಮಾರ” ಚಿತ್ರದಲ್ಲಿ ಉದಯಕುಮಾರ್ ನಾಯಕನಾಗಿದ್ದರೆ, ರಾಜ ಕುಮಾರ್ ಖಳನಾಯಕನಾಗಿ ಅಭಿನಯಿಸಿದ್ದು ವಿಶೇಷವಾಗಿತ್ತು 🙏💐. ರವಿಕುಮಾರ್. 🌹🌹🌹🌹🌹. ಬೆಂಗಳೂರು. 🌹🌹🌹🌹

About Author

Leave a Reply

Your email address will not be published. Required fields are marked *

You may have missed