AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮಂಗಳೂರು ನಗರದ,ಗುರುಪುರ ಕೈಕಂಬ ಸಮೀಪದ, ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ,ರಸ್ತೆಗುರುಳಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ದಿನಾಂಕ 02/01/2024ರ ಮಂಗಳವಾರ ರಾತ್ರಿ ನಡೆದಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ,ಪೊಳಲಿ ದ್ವಾರಕ್ಕಿಂತ ಅಂದಾಜು ನೂರು ಮೀ.ದೂರದಲ್ಲಿ ಬಸ್ ರಸ್ತೆಗುರುಳಿದೆ.ಶುಭಲಕ್ಷ್ಮಿ ಎಂಬ ಹೆಸರಿನ ಖಾಸಗಿ ಬಸ್,ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.ಈ ಬಸ್ ಗುರುಪುರ ಕೈಕಂಬದಿಂದ ಬಿ.ಸಿ‌.ರೋಡ್ ಕಡೆಗೆ ಪ್ರಯಾಣಿಸುತ್ತಿತ್ತು.ಬಸ್ಸಿನಲ್ಲಿ 40ರಿಂದ 50 ರಷ್ಟು ಪ್ರಯಾಣಿಕರಿದ್ದರು ಅದರಲ್ಲಿ ಸುಮಾರು 20ರಷ್ಟು ಮಂದಿಗೆ ಗಾಯವಾಗಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ದುರ್ಘಟನೆ ಸಂಭವಿಸಿದ ತಕ್ಷಣ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ.ಅಲ್ಲದೆ ವಾಹನದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಉಂಟಾಗಿದೆ.ಬಳಿಕ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿದ್ದಾರೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

 

About Author

Leave a Reply

Your email address will not be published. Required fields are marked *