AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ. ಬಸ್ : ಓರ್ವ ಪ್ರಯಾಣಿಕ ಸಾವು,ಮೂವರು ಗಂಭೀರ.”

1 min read

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಶಾಲೆಯ ಕಾಂಪೌಂಡ್ ಹಾಗೂ ಮನೆಗೆ ಡಿಕ್ಕಿ ಹೊಡೆದು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು,10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಸಾವನ್ನಪ್ಪಿದ ವ್ಯಕ್ತಿ.ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ ಜಮೀನಿಗೆ ನುಗ್ಗಿದೆ.ಬಳಿಕ ಮನೆಗೆ ಡಿಕ್ಕಿ ಹೊಡೆದು ಶಾಲೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ತಕ್ತಿ ಸಾವನ್ನಪ್ಪಿದ್ದಾನೆ. 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಗಾಯಾಳುಗಳು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಮೀನಿನಲ್ಲಿದ್ದ ವಾಸದ ಮನೆಗೂ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಅರ್ಧ ಭಾಗ ಕುಸಿದು ಬಿದ್ದಿದೆ.ಶಾಲೆಯ ಕಾಂಪೌಂಡ್ ಜಖಂಗೊಂಡಿದ್ದು,ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *