AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ತೇರದಾಳ ಮತಕ್ಷೇತ್ರದ ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳ ಪ್ರತಿಭಟನೆ #avintvcom

1 min read
Featured Video Play Icon

ತೇರದಾಳ ಮತಕ್ಷೇತ್ರದ ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳ ಪ್ರತಿಭಟನೆ

 

ಆ್ಯಂಕರ್ ಬಿಟ್ :- ಕಳೆದ ಕೆಲವು ದಿನಗಳ ಹಿಂದೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ನಡೆದ ಮಹಿಳಾ ಸದಸ್ಯರ ಮೇಲೆ ನಡೆದ ಜಗ್ಗಾಟ ಪ್ರಕರಣಕ್ಕೆ ಸಂಭವಿಸಿದಂತೆ ಶಾಸಕರು ಸಹ ಭಾಗವಹಿಸಿದ್ದರುವ ಅವರು ಕಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿವಿಧ ಸಂಘಟನೆಗಳು ಮಹಾಲಿಂಗಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣ

ಬಾಗಲಕೋಟೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ವಿರುದ್ಧ ಬೃಹತ್ ಪ್ರತಿಭಟನೆ..

ದಲಿತ,ಕನ್ನಡಪರ ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ..

ಪ್ರಮುಖ  ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ..

ಶಾಸಕ ಸಿದ್ದು ಸವದಿ ರಾಜೀನಾಮೆಗೆ ಆಗ್ರಹ..

ಸಿದ್ದು ಸವದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ..

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಲಿಂಗಪುರ ಪುರಸಭೆ ಚುನಾವಣೆ ಕಳೆದ ಇದೆ ತಿಂಗಳು 9/10/2020 ರಂದು ನಡೆದಿತ್ತು ಆದರೆ ಬಿಜೆಪಿ ಪಕ್ಷದ ಮೂವರು ಮಹಿಳಾ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಬೆಂಬಲ ಪಡೆದು ಅಧ್ಯಕ್ಷ ಗಾದಿ ಹೀಡಿಯುವದಕ್ಕಾ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರು ಆದರೆ ಚುನಾವಣೆ ಸಂದರ್ಭದಲ್ಲಿ ಶಾಸಕರ ಸಮ್ಮುಖದಲ್ಲಿ ಅದೇ ಮಹಿಳಾ ಅಭ್ಯರ್ಥಿಗಳನ್ನು ಪುರಸಭಯ ಆವರಣದಲ್ಲಿ ಮತ ಚಲಾಯಿಸಲು ಬೀಡದೆ ಅವರನ್ನು ಬಿಜೆಪಿ ಪಕ್ಷದ ಮುಖಂಡರ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ ನಡುವೆ ವಾಗ್ವಾದ ನಡೆದು ಅವರನ್ನು ಏಳೆದಾಡಿದ್ದರು ಈ ಸಂದರ್ಭದಲ್ಲಿ ತೇರದಾಳ ಮತಕ್ಷೇತ್ರದ ಶಾಸಕರಾದ ಸಿದ್ದು ಸವದಿ ಅವರು ಕೂಡಾ ಇದ್ದರು ಅಚನಕ್ಕಾಗು ಅವರು ಮಹಿಳಾ ಅಭ್ಯರ್ಥಿಗಳನ್ನು ಗದ್ದಲದ ನಡುವೆ ನೂಕು ನುಗ್ಗಲು ಉಂಟಾಗಿ ಅವರು ಮಹಿಳಾ ಅಭ್ಯರ್ಥಿಯನ್ನು ಏಳೆದಾಡಿದ್ದಾರೆ ಎಂದಿ ಆರೋಪಿಸಿ ಕೆಲವು ಸಂಘಟನೆಗಳು ಇಂದು ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭನೆ ನಡೆಸಿದರು.

ವರದಿ. ಪರಶುರಾಮ್. ಕಾಂಬಳೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author