AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಾಂಡೇಲಿ:ದಾಂಡೇಲಿ ನಗರ ಹಾಗೂ ಗ್ರಾಮೀಣ ಠಾಣೆಯ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮ ನಡೆಯಿತು.#avintvcom

1 min read
Featured Video Play Icon

ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸುವಂತೆ ವಾಹನ ಸವಾರರಿಗೆ ಮನವಿ ಮಾಡಿದ ಡಿ.ವೈ.ಎಸ್.ಪಿ. ಶಿವಾನಂದ ಚಲವಾದಿ
ದಾಂಡೇಲಿ: ದಾಂಡೇಲಿ ನಗರ ಹಾಗೂ ಗ್ರಾಮೀಣ ಠಾಣೆಯ ನೇತೃತ್ವದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಡಿ.ವೈ.ಎಸ್.ಪಿ. ಶಿವಾನಂದ ಚಲವಾದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೇ ಚಲಾಯಿಸುತ್ತಿದ್ದ ವಾಹನ ಸವಾರರಿಗೆ ಗುಲಾಬಿ ಹೂ ನೀಡಿದ ಡಿ.ವೈ.ಎಸ್.ಪಿ. ಶಿವಾನಂದ ಚಲವಾದಿಯವರು ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡುವುದರಿಂದ ಆಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಿದರು. ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಹಾಗೂ ಸಾರಿಗೆ ನಿಯಮ ಪಾಲಿಸುವಂತೆ ಮನವಿ ಮಾಡಿದರು.
ನಂತರ ನಗರದ ಮುಖ್ಯ ರಸ್ತೆಯಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಸಿ.ಪಿ.ಐ. ಪ್ರಭು ಗಂಗನಳ್ಳಿ , ನಗರ ಠಾಣೆಯ ಪಿ.ಎಸ್.ಐ ಯಲ್ಲಪ್ಪ ಎಸ್. ಗ್ರಾಮೀಣ ಠಾಣೆಯ ಪಿ.ಎಸ್.ಐ. ಹನ್ಮಂತ ಬಿರಾದರ, ಮಾದೇವಿ ನಾಯ್ಕವಾಡಿ ಮುಂತಾದವರಿದ್ದರು.

About Author