AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಭವಿಷ್ಯ ಭಾರತದ ಭರವಸೆ ಆಮ್ ಆದ್ಮಿ ಪಕ್ಷ: 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಉಸ್ತುವಾರಿ ರೋಮಿ ಭಾಟಿ ಅಭಿಮತ #avintvcom

1 min read
Featured Video Play Icon

ಭವಿಷ್ಯ ಭಾರತದ ಭರವಸೆ ಆಮ್ ಆದ್ಮಿ ಪಕ್ಷ: 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ ಅಭಿಮತ

ಮಹಾತ್ಮ ಗಾಂಧೀಜಿ ಅವರ ಸ್ವರಾಜ್ಯ ಕಲ್ಪನೆಯ ಮೇಲೆ ಸ್ಥಾಪಿತವಾದ ಆಮ್ ಆದ್ಮಿ ಪಕ್ಷ ಇಂದು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದ್ದು ಭಾರತದ ಮುಂದಿನ ಭರವಸೆಯಾಗಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ನುಡಿದರು.

ಗುರುವಾರ ಸಂಜೆ ಹಲಸೂರು ಕೆರೆ ಬಳಿಯ ಆರ್‌ಬಿಎನ್‌ಎಂಎಸ್ ಸಭಾಂಗಣದಲ್ಲಿ ನಡೆದ  ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿ, ವರ್ಷ ಎಂಟು ಸಾಧನೆ ನೂರೆಂಟು ಎನ್ನುವ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಡೀ ಭಾರತದ ರಾಜಕೀಯ ಇತಿಹಾಸದಲ್ಲಿ ಇಷ್ಟು ವೇಗವಾಗಿ ಬೆಳೆದ ರಾಜಕೀಯ ಪಕ್ಷ ಇನ್ನೊಂದಿಲ್ಲ. ಕೇವಲ ಎಂಟು ವರ್ಷದಲ್ಲಿ ನೂರೆಂಟು ಸಾಧನೆ ಮಾಡಿದ ಆಮ್ ಆದ್ಮಿ ಪಕ್ಷ  ಭಾರತದ 130 ಕೋಟಿ ಜನರಲ್ಲಿ ಬದಲಾವಣೆಯ ಭರವಸೆ ಮೂಡಿಸಿದೆ ಎಂದರು.

ರಾಷ್ಟ್ರೀಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆಯನ್ನು 3 ಬಾರಿ ಏರಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ ಎಂದು ಹೇಳಿದರು.

ಕೊರೋನಾ ಯೋಧರನ್ನು ಸನ್ಮಾನಿಸಿ ಮಾತನಾಡಿದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರು, ನಾವು ಇಂದು ನಿಜವಾದ ದೇಶ ಭಕ್ತರನ್ನು ಸನ್ಮಾನ ಮಾಡಿದ್ದೇವೆ. ಭವಿಷ್ಯದಲ್ಲಿ ನಮ್ಮ ದೇಶ ಏನಾದರೂ ಅಪಾಯಕ್ಕೆ ಸಿಲುಕಿದಾಗ ಜನರು  ಬದಲು ತಾನೇ ಮುಂದೆ ನಿಂತು ಸಹಾಯ ಮಾಡುವಂತಹ ಸರ್ಕಾರ ಅಧಿಕಾರಕ್ಕೆ ಬರುವಂತಾಗಲಿ ಎಂದು ಆಶಿಸುತ್ತೇನೆ ಎಂದರು.

ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಸಹ ಸಂಚಾಲಕ ವಿಜಯ್ ಶರ್ಮ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಸಹ ಕಾರ್ಯದರ್ಶಿ ದರ್ಶನ್ ಜೈನ್, ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಮುಖ್ಯ ವಕ್ತಾರ ಶರತ್ ಖಾದ್ರಿ ಇದ್ದರು.

ಇದೇ ವೇಳೆ ಅರವಿಂದ ಕೇಜ್ರಿವಾಲ್ ಅವರ ರಾಜಕೀಯ ಜೀವನ ಆಧಾರಿತ “ಇನ್‌ಸಿಗ್ನಿಫಿಕೆಂಟ್ ಮ್ಯಾನ್” ಚಲನಚಿತ್ರ ಪ್ರದರ್ಶನ ಹಾಗೂ

ಏಷ್ಯಾದ ಬಲಶಾಲಿ ವ್ಯಕ್ತಿ ಮನೋಜ್ ಚೋಪ್ರಾ ಅವರಿಂದ ಶಕ್ತಿ ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author