AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಮದುವೆಯಾಗುವುದಾಗಿ ನಂಬಿಸಿ ಮೂಡಿಗೆರೆ ಮೂಲದ ಯುವಕನಿಂದ ಯುವತಿಗೆ ಲೈಂಗಿಕ ಕಿರುಕುಳ : ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು.”

1 min read

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ,ಅಣಜೂರು ನಿವಾಸಿ,ರಿಕ್ಷಾ ಚಾಲಕ ರಝೀನ್ ಲೈಂಗಿಕ ಕಿರುಕುಳ ನೀಡಿರುವ ಆರೋಪಿ.

ಈತ ಮತ್ತು ಮೂಡಿಗೆರೆ ತಾಲ್ಲೂಕಿನ 17 ವರ್ಷದ ಬಾಲಕಿ ಕಳೆದ ಪರಸ್ಪರ ಪ್ರೀತಿಯ ಬಲೆಗೆ ಬಿದ್ದಿದ್ದರು.ಅದೇ ಸಲುಗೆಯಿಂದ ನಾಲ್ಕು ತಿಂಗಳ ಹಿಂದೆ ಆಕೆಯನ್ನು ಮಂಗಳೂರಿಗೆ ಕರೆಸಿಕೊಂಡಿದ್ದಾನೆ‌. ಕುಂಪಲದ ತನ್ನ ಬಾಡಿಗೆ ಮನೆಗೆ ಕರೆದೊಯ್ದಿದ್ದ ರಝೀನ್ ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಬಾಲಕಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.

ಇದೀಗ ಸಂತ್ರಸೆ ನೀಡಿದ ದೂರಿನಂತೆ ಆರೋಪಿಯ ಮೇಲೆ ಪೊಕ್ಸೊ ಕೇಸ್ ದಾಖಲಾಗಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *