AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಜಿಲ್ಲೆಯ ಅತಿಥಿ ಶಿಕ್ಷಕರು ಹೆಚ್ಚು ಶ್ರಮ ವಹಿಸಿ ಶಿಕ್ಷಣ ನೀಡುತ್ತಿದ್ದಾರೆ. ಅತಿಥಿ ಶಿಕ್ಷಕರನ್ನು ಸರಕಾರ ಖಾಯಂಗೊಳಿಸುವ ಮೂಲಕ ಅತಿಥಿ ಶಿಕ್ಷಕರ ನೆರವಿಗೆ ಬರಬೇಕೆಂದು ಅತಿಥಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕರಡಿಗುಡ್ಡ ಹೇಳಿದರು.

ಅವರು ಇತ್ತೀಚೆಗೆ ಮೂಡಿಗೆರೆ ಪಟ್ಟಣದ ಲ್ಯಾಂಪ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅತಿಥಿ ಶಿಕ್ಷಕರ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,ಕಳೆದ ಅನೇಕ ವರ್ಷದಿಂದ ಅಲ್ಪ ಸಂಭಾವನೆಗೆ ಅತಿಥಿ ಶಿಕ್ಷಕರು ಇತರೇ ಸರಕಾರಿ ಶಿಕ್ಷಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ಈಗಿರುವ ಬೆಲೆ ಏರಿಕೆಯಿಂದಾಗಿ ಕುಟುಂಬ ನಿರ್ವಹಣೆ ಮಾಡಲು ಕಷ್ಟಸಾಧ್ಯವಾಗಿದೆ.ಹಾಗಾಗಿ ಅತಿಥಿ ಶಿಕ್ಷಕರಿಗೆ ಉತ್ತಮ ವೇತನ ನೀಡಬೇಕು ಜೊತೆಗೆ ಎಲ್ಲಾ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕೆಂದು ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಚಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಅತಿಥಿ ಶಿಕ್ಷಕರರೆಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದು,ಎಲ್ಲಾ ಶಿಕ್ಷಕರು ಸಂಘಟನೆಯನ್ನು ಬಲಪಡಿಸಿಕೊಂಡು ತಮ್ಮ ಬೇಡಿಕೆಯನ್ನು ನ್ಯಾಯಯುತವಾಗಿ ಈಡೇರಿಸಿ ಕೊಳ್ಳಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಮಂಜಪ್ಪ,ರಾಜ್ಯ ಸಂಘದ ಅಧ್ಯಕ್ಷ ಎಚ್.ಹನುಮಂತ್,ಎಚ್.ಕೆ.ಲತಾ,ಆನಂದ,ಶುಭ,ಕೀರ್ತಿ, ಹರೀಶ್,ರವಿ ಮತ್ತಿತರರಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *