AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ದಾವಣಗೆರೆ ತಾಲೂಕು ಬಾಡ ಜಿಲ್ಲಾ ಪಂಚಾಯತ್ ಭಾಗದ…#avintvcom

1 min read
Featured Video Play Icon

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ದಾವಣಗೆರೆ ತಾಲೂಕು ಬಾಡ ಜಿಲ್ಲಾ ಪಂಚಾಯತ್ ಭಾಗದ ಬಾಡ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ, ಕರ್ನಾಟಕ ಸರ್ಕಾರ, ನೆಲ ಮತ್ತು ಜಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ಹಾಗೂ ಬಾಡ ನೀರು ಬಳಕೆದಾರರ ಸಹಕಾರ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಆಂದೋಲನ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಮಯದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತರಿಂದ ಸಾಕಷ್ಟು ಅರ್ಜಿಗಳು ಸ್ವೀಕೃತಗೊಂಡವು.

ತಮ್ಮ ಭಾಗದ ರೈತರ ಪ್ರಮುಖ ಸಮಸ್ಯೆಗಳ ಕುರಿತು ಅಧ್ಯಕ್ಷರೊಂದಿಗೆ ಸುದೀರ್ಘವಾಗಿ ಚರ್ಚಿಸಿ, ನಮ್ಮ ಭಾಗಗಳಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಕಾಡ ಪ್ರಾಧಿಕಾರದಿಂದ ಹೆಚ್ಚಿನ ಅನುದಾನ ಹಾಗೂ ಕಾಮಗಾರಿಗಳನ್ನು ನೀಡುವ ಮೂಲಕ  ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಒತ್ತಾಯಿಸಿದರು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರು ನಿಮ್ಮ ಎಲ್ಲಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಮುಖ್ಯಮಂತ್ರಿಗಳಿಂದ ಸೂಕ್ತವಾಗಿ ಸ್ಪಂದನೆ ದೂರೆಯುತ್ತಿದೆ, ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.. ಆದಷ್ಟು ಶೀಘ್ರವೇ ರಾಜ್ಯ ಸರ್ಕಾರದಿಂದ ಸೂಕ್ತ ಅನುದಾನ ಬಿಡುಗಡೆಯಾಗಲಿದ್ದು ರೈತರು ತಾಳ್ಮೆ ಕಳೆದುಕೊಳ್ಳದೆ ತಾಳ್ಮೆಯಿಂದ ವರ್ತಿಸಿ ಪ್ರಬುದ್ಧತೆ ತೊರಬೇಕೆಂದು ಹೇಳಿದರು.ಮುಂದುವರೆದು ಕಾಡ ಪ್ರಾಧಿಕಾರವನ್ನು ಮಾದರಿ ಪ್ರಧಿಕಾರವನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದ್ದು, ಅದನ್ನು ಅಂತ ಅಂತವಾಗಿ ಜಾರಿಗೊಳಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ವಾಲ್ಮಿ ನಿರ್ದೇಶಕರಾದ ರಾಜೇಂದ್ರ ಪೋದ್ದಾರ್ ಅವರು, ಜಿಲ್ಲಾ ಪಂಚಾಯತ್ ಸದಸ್ಯರಾದ ಶೈಲಜಾ ಅವರು, ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರಾದ ಜಿ.ಆರ್.ಪ್ರಭಾಕರ್ ಅವರು, ಜಿ.ಕೆ.ಅಣ್ಣಪ್ಪ ಅವರು, ಡಿ.ರವಿ ಅವರು, ಜಿ.ಎಸ್.ಹನುಮಂತಪ್ಪ ಅವರು ಇನ್ನು ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author