AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೇಟ್ : ಆದೇಶ ಹೊರಡಿಸಿದ ಬೆಂಗಳೂರು ನಗರ ಸಂಚಾರ ಪೊಲೀಸ್.”

1 min read

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ವಿಶ್ವದಲ್ಲಿ ಕುಖ್ಯಾತಿ ಪಡೆದಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡ ಸಂಚಾರ ದಟ್ಟಣೆಗೆ ಕಾರಣವಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸಮರ ಸಾರಿರುವ ಬೆಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ನಿಯಮ ಹಾಗೂ ಕ್ರಮಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ,6 ವರ್ಷ ಮೇಲ್ಪಟ್ಟ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಅವರು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕಾರ್ಯಾಚರಣೆ ಆರಂಭಿಸಿರುವ ಬೆಂಗಳೂರು ಸಂಚಾರ ಪೊಲೀಸರು ಆಟೋ,ಸ್ಕೂಲ್ ವ್ಯಾನ್,ಟ್ರಕ್ ಸೇರಿದಂತೆ ನಾನಾ ವಾಹನಗಳ ಪರಿಶೀಲನೆ ನಡೆಸಿ ನಿಯಮ ಪಾಲನೆ ಮಾಡದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಹಾಗೆಯೇ, ಶಾಲೆಗಳ ಬಳಿ ಕಾರ್ಯಾಚರಣೆ ನಡೆಸುವಾಗ ಶಾಲೆಗೆ ಬರುವ ಪುಟ್ಟ ಮಕ್ಕಳು ಹೆಲ್ಮೆಟ್‌ ಧರಿಸದೇ ಇರುವುದು ಕಂಡುಬಂದಿದೆ.

ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇದೀಗ ಸಂಚಾರ ಪೊಲೀಸರು 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶಿಸಿದ್ದಾರೆ.

ಪೋಷಕರು ಮಕ್ಕಳನ್ನು ಶಾಲೆಗೆ ಬಿಡುವಾಗ ಅವರನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು. ಇನ್ನು ವಾಹನದಲ್ಲಿ ಮೂರಕ್ಕೂ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ. ನಿಯಮ ಮೀರಿದ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆಟೋ,ಓಮ್ನಿ,ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವುದು ಸರಿಯಲ್ಲ. ಅಂತಹ ವಾಹನಗಳ ವಿರುದ್ದವೂ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಯಲಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊದುಕೊಂಡು ಹೋಗುವವರ ವಿರುದ್ಧವೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಮನೆಮನೆಗೆ ತೆರಳಿ ದಂಡ ಸಂಗ್ರಹ.

ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡಿದೇ ತಪ್ಪಿಸಿಕೊಂಡು ಓಡಾಡುವವರ ಮನೆಗೆ ತೆರಳಿ ದಂಡ ಸಂಗ್ರಹ ಮಾಡಲು ಸಂಚಾರ ಪೊಲೀಸ್ ಇಲಾಖೆ ಮುಂದಾಗಿದೆ. 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿದ್ದವರ ಮನೆಗೆ ಸಂಚಾರ ಪೊಲೀಸರು ತೆರಳಿ ದಂಡ ವಸೂಲಿ ಮಾಡುತ್ತಿದ್ದಾರೆ.

ಬೆಂಗಳೂರಲ್ಲಿ ಪ್ರತಿ ದಿನ 1.2 ಕೋಟಿ ವಾಹನಗಳು ಸಂಚರಿಸುತ್ತವೆ. ಜತೆಗೆ 2,300 ಹೊಸ ವಾಹನಗಳು ಸೇರ್ಪಡೆಯಾಗುತ್ತಿವೆ. ನಿತ್ಯ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಅಲ್ಲದೇ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ, ತಪ್ಪಿಸಿಕೊಂಡು ಓಡಾಡುವರು ಹೆಚ್ಚಳವಾಗಿದ್ದಾರೆ. ಇದೀಗ ನಗರದಲ್ಲಿ 2,681ಕ್ಕೂ ಅಧಿಕ ವಾಹನಗಳು 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿವೆ.

ದಂಡ ಹೊಂದಿರುವ ವಾಹನ ಸವಾರರನ್ನು ಪತ್ತೆ ಮಾಡಿ ಸಂಚಾರ ಪೊಲೀಸರು ಅವರ ಮನೆಗೆ ತೆರಳಿ ದಂಡ ವಸೂಲಿ‌ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ 50 ಸಾವಿರಕ್ಕೂ ಅಧಿಕ ದಂಡ ಹೊಂದಿರುವ 2681 ವಾಹನಗಳು ಇವೆ. ದಂಡ ವಸೂಲಿ ಪ್ರಕ್ರಿಯೆ ಕೂಡ ಆರಂಭವಾಗಿದೆ. ಇದುವರೆಗೆ 120 ಜನರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದಿದ್ದರೆ ಅಂತಹ ವಾಹನ ಸವಾರರ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲಿದ್ದು, ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಲಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *