लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅವಿನ್ ಟಿವಿ ಸುದ್ದಿಜಾಲ ✒️: ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಕೊಪ್ಪ ಫೆ ೧೫ : ಕಾಫಿನಾಡಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ.ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಪ್ರೀತಾಗೆ ಇನ್ನೂ ಕೇವಲ 13 ವರ್ಷ, ಏಳನೇ ತರಗತಿ ವಿದ್ಯಾರ್ಥಿನಿ,
ಊಟ ಮಾಡುವಾಗ ತಟ್ಟೆ ಬಿದ್ದು ಅನ್ನ ಚೆಲ್ಲಿದ್ದಕ್ಕೆ ಅಮ್ಮ ಬೈದಿದ್ದರೂ ಎನ್ನಲಾಗಿದೆ.
“ಬರೀ ಟಿವಿ ನೋಡು ಓದಬೇಡ, ಚೆಲ್ಲಿರೋ ಅನ್ನ ಕ್ಲೀನ್ ಮಾಡು ಎಂದು ತಾಯಿ ಬುದ್ಧಿವಾದ ಹೇಳಿದ್ದರು ಎಂದು ಹೇಳಿದ್ದಕ್ಕೆ ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.

ಮಗಳಿಗೆ ಬುದ್ಧಿ ಮಾತು ಹೇಳಿ ತಾಯಿ ಕೆಲಸಕ್ಕೆ ಹೋಗಿದ್ದರು,
ತಾಯಿ ಹೋದ ಬಳಿಕ ವೇಲ್ ನಿಂದ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ, ಈ ಬಗ್ಗೆ
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
•••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ…. ✒️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed