AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ವಿಡಿಯೋ ಕಾನ್ಫರೆನ್ಸ್ : ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್.”

1 min read

ಚಿಕ್ಕಮಗಳೂರು (Chikkamagaluru): ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ,ಸಕಲ ರೀತಿಯಲ್ಲಿ ಸನ್ನದ್ಧರಾಗುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ವರುಣನ ಆರ್ಭಟ – ರಸ್ತೆ ಮುಳುಗಡೆ.

ಮಳೆಗೆ ತುಂಬಿಹರಿದ ತುಂಗಾಭದ್ರಾ ನದಿ,ತೂಗುಸೇತುವೆಗೆ ಹಾನಿ,ಶೃಂಗೇರಿ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ತಡರಾತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಸಚಿವರು, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ,ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸಂತ್ರಸ್ತರಿಗೆ ತ್ವರಿತ ಪರಿಹಾರ ಒದಗಿಸುವ ಬಗ್ಗೆ ಸಲಹೆ ನೀಡಿದರು.

ಹೆಬ್ಬಾಳೆ ಸೇತುವೆ,ಕಳಸ,ಹೊರನಾಡು. 

“ಜಿಲ್ಲೆಯ ಜನರ ಸುರಕ್ಷತೆಗೆ ಒತ್ತು ನೀಡುವಂತೆ ನಿರ್ದೇಶಿಸಿದ ಸಚಿವರು, ಪ್ರವಾಹದ ನಂತರದ ಪರಿಣಾಮಗಳನ್ನು ನಿರ್ವಹಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು. ಜತೆಗೆ ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ನಡೆಸಬೇಕು” ಎಂದರು.

 

✍️ಬರಹ ಕೃಪೆ.✍️

ಸಿದ್ದಿಕ್ ಚಕ್ಕಮಕ್ಕಿ.

7847891857.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *