ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಂಜೇಗೌಡ ನೇಮಕ…
1 min read
ಅವಿನ್ ಟಿವಿ ಸುದ್ದಿಜಾಲ ✒️: ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಂಜೇಗೌಡ ನೇಮಕ.
ಚಿಕ್ಕಮಗಳೂರು ಫೆ ೦೩: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಎಚ್.ಪಿ .ಮಂಜೇಗೌಡ ನೇಮಕಗೊಂಡಿದ್ದಾರೆ.
ಈ ಕುರಿತು ಇಂದು ಅಧಿಕೃತ ಆದೇಶ ಹೊರ ಬಿದ್ದಿದೆ.
ಬೀಕನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಪಕ್ಷ ಸೇರಿದಂತೆ ಜನಾಧಿಕಾರದ ಮೂಲಕ ಪಡೆದ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಗೌಡರು ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು.
ಶಾಂತೇಗೌಡ , ಗಾಯತ್ರಿ ಶಾಂತೇಗೌಡ ,ಬಿ ಎಲ್ ಶಂಕರ್, ಎಚ್ .ಡಿ. ತಮ್ಮಯ್ಯನವರ ಜೊತೆ ಗುರುತರವಾಗಿ ಗುರುತಿಸಿಕೊಂಡ ಇವರು ಅವರು ಸ್ಪರ್ಧಿಸಿದ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಚುನಾವಣೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು, ಎರಡು ದಶಕಗಳ ಕಾಲ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಕಾರಣ ಈ ಹುದ್ದೆ ಲಭಿಸಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
•••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ… ✒️
ಚಿಕ್ಕಮಗಳೂರು

