AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಆದರೆ ಸಕ್ರಿಯ ರಾಜಕಾರಣದಿಂದ ದೂರವಾಗುವುದಿಲ್ಲ: ಮಹತ್ವದ ರಾಜಕೀಯ ನಿರ್ಧಾರ ಪ್ರಕಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು…

1 min read

ಅವಿನ್ ಟಿವಿ ಸುದ್ದಿಜಾಲ ✍️: ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಆದರೆ ಸಕ್ರಿಯ ರಾಜಕಾರಣದಿಂದ ದೂರವಾಗುವುದಿಲ್ಲ: ಮಹತ್ವದ ರಾಜಕೀಯ ನಿರ್ಧಾರ ಪ್ರಕಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು.

ಮಂಡ್ಯ ಜು 26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆ ಮೂಲಕ, ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರುವುದಾಗಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಿಂದ ದೂರವಾಗುವುದಿಲ್ಲ. ಜನರ ಪರವಾಗಿ, ಅವರ ಕಷ್ಟ-ಸುಖಗಳಿಗೆ ಧ್ವನಿಯಾಗಿ ಕೆಲಸ ಮುಂದುವರಿಸುತ್ತೇನೆ” ಎಂದು ಹೇಳಿದ್ದಾರೆ.

ರಾಜಕೀಯ ವ್ಯವಸ್ಥೆಯಲ್ಲಿ ಹಣದ ಪ್ರಭಾವ ಹೆಚ್ಚುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, “ಈ ಹಿಂದೆ ಚುನಾವಣೆಗೆ ನಿಲ್ಲುತ್ತಿದ್ದಾಗ ಕ್ಷೇತ್ರದ ಜನರೇ ತಮ್ಮ ಹಣದಿಂದ ನಮ್ಮನ್ನು ಗೆಲ್ಲಿಸುತ್ತಿದ್ದರು. ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ರಾಜಕೀಯ ಇಂದು ಕಲುಷಿತಗೊಂಡಿದೆ” ಎಂದಿದ್ದಾರೆ.

ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್‌ನಲ್ಲಿಯೂ ಪೋಸ್ಟ್‌ ಹಂಚಿಕೊಂಡಿರುವ ಸಿದ್ದರಾಮಯ್ಯ, “ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು – ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ” ಎಂದು ಬರೆದಿದ್ದಾರೆ.

ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ.

ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ.

ಇತ್ತೀಚೆಗೆ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ್ದ 79 ವರ್ಷದ ಸಿದ್ದರಾಮಯ್ಯನವರು ಕರ್ನಾಟಕದ ಸುದೀರ್ಘ ಅವಧಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ದಾಖಲೆ ನಿರ್ಮಿಸಿದ್ದರು. ಈಗ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ.

ಸಿದ್ದರಾಮಯ್ಯನವರ ಈ ನಿವೃತ್ತಿ ಘೋಷಣೆ ಕಾಂಗ್ರೆಸ್‌ನ ಮುಂದಿನ ನಾಯಕತ್ವ, ಉತ್ತರಾಧಿಕಾರ ರಾಜಕೀಯ ಹಾಗೂ 2028ರ ವಿಧಾನಸಭಾ ಚುನಾವಣೆಯ ಸಮೀಕರಣಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
••••••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ….. ✍️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed