AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನವದೆಹಲಿ ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

1 min read
Featured Video Play Icon

ಅರ್ನಬ್​ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್​ ನವದೆಹಲಿ ಪತ್ರಕರ್ತ​ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. 2018ರ ಪ್ರಕರಣವೊಂದ್ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಬ್ ಗೋಸ್ವಾಮಿಯನ್ನ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು ಬಿ-ರಿಪೋರ್ಟ್​ ಸಲ್ಲಿಸಲಾಗಿದ್ದ ಪ್ರಕರಣವನ್ನ ರಿ-ಓಪನ್ ಮಾಡಿ ತಮ್ಮನ್ನ ಬಂಧಿಸಿದ್ದನ್ನ ಪ್ರಶ್ನಿಸಿ ಅರ್ನಬ್ ಮುಂಬೈ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನ ಕೋರ್ಟ್​ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಅರ್ನಬ್  ತಮಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಅರ್ನಬ್ ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದೆ 53 ವರ್ಷದ ಇಂಟೀರಿಯರ್ ಡಿಸೈನರ್‌ನನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ರಾಯಗಡ್ ಪೊಲೀಸರು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನವೆಂಬರ್ 14 ರಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು

About Author