AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪಕ್ಷದ ತತ್ವ ಸಿದ್ಧಾಂತಕ್ಕೆ ಯಾರಾದರೂ ಅಡ್ಡಿ ಬಂದರೆ ಬಿಡುವ ಪ್ರಶ್ನೆಯೇ ಇಲ್ಲ- ಶಾಸಕ ಡಾ.ಭರತ್ ಶೆಟ್ಟಿ avintv.com

1 min read
Featured Video Play Icon

ಪಕ್ಷದ ತತ್ವ ಸಿದ್ಧಾಂತಕ್ಕೆ ಯಾರಾದರೂ  ಅಡ್ಡಿ ಬಂದರೆ ಬಿಡುವ ಪ್ರಶ್ನೆಯೇ ಇಲ್ಲ- ಶಾಸಕ ಡಾ.ಭರತ್ ಶೆಟ್ಟಿ

ನಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕಾರ್ಯಕರ್ತರ ಹಿತ ಬಹಳ ಮುಖ್ಯ. ಅದರೊಂದಿಗೆ ನಮ್ಮ ಪಕ್ಷದ ತತ್ವ, ಸಿದ್ಧಾಂತಕ್ಕೆ ಯಾರಾದರೂ  ಅಡ್ಡಿ ಬಂದರೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದ್ದಾರೆ.

ಅವರು ಭಾನುವಾರ ಭಾರತೀಯ ಜನತಾ ಪಕ್ಷದ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಯುವ ಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ,ಮಂಡಲ ಉಪಾಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಚಿನ್ ಹೆಗ್ಡೆ ಮಾಧವ್ ಟೈಲರ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು,ರಾಜೀವ್ ಶೆಟ್ಟಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಹಾಗೂ ಶಕ್ತಿ ಕೇಂದ್ರ ಪ್ರಮುಖರುಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

About Author