AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಿಎಂಟಿಸಿ ಬಸ್ ಮತ್ತು ಬೈಕಿನ ನಡುವೆ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ದಿನಾಂಕ 02/02/2024ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್ ಗೆ ಬೈಕಿನಲ್ಲಿ ಬರುತಿದ್ದ ಯುವತಿ,ಬಳಿಕ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದರು.ಶುಕ್ರವಾರ ಬೆಳಗ್ಗೆ ಮಲ್ಲೇಶ್ವರದಿಂದ ಹೊರಟಿದ್ದು,ಇದೇ ಮಾರ್ಗದಲ್ಲಿ ಬಂದ ಬಸ್ ಯುವತಿ ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸಮೇತ ಎಳೆದೊಯ್ದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಿಸದೇ ಯುವತಿ ಮೃತಪಟ್ಟಿದ್ದಾಳೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *