लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಿ.ಸಿ.ಪಾಟೀಲ್ ವಿದ್ಯಾರ್ಥಿಗಳ ಜೊತೆ ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು.avintvcom

1 min read

 

ಕೃಷಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಕೃಷಿ ಸಚಿವರು

ಧಾರವಾಡ,ನ.11: ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ಜೊತೆ ವಿಡಿಯೋ ಸಂವಾದ ನಡೆಸಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಧಾರವಾಡಕ್ಕೆ ಭೇಟಿ ನೀಡಿದ್ದ ಸಚಿವರು, ಕುಲಪತಿ ಎಂ.ಬಿ.ಚೆಟ್ಟಿಯೊಡಗೂಡಿ ವಿದ್ಯಾರ್ಥಿಗಳ ಜೊತೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡರು.

ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕೊನೆಯ ಆರು ತಿಂಗಳು ರೂರಲ್ ಅಗ್ರಿಕಲ್ಚರ್ ವರ್ಕ್ ಎಕ್ಸಪೀರಿಯನ್ಸ್  ಪ್ರೋಗ್ರಾಮ್ (ರಾವೆ) ಪಠ್ಯೇತರ ಚಟುವಟಿಕೆಯಿದ್ದು, ಇದರಡಿ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ರೈತರೊಂದಿಗೆ ತಂಗಿ, ಅಲ್ಲಿನ ರೈತ ಸಂಪರ್ಕ ಕೇಂದ್ರಗಳ ಜೊತೆ ಸೇರಿ ಗ್ರಾಮೀಣ ಭಾಗದ ರೈತರ ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಿ, ಹೊಸಹೊಸ ತಂತ್ರಜ್ಞಾನ, ಕೃಷಿ ಸಂಬಂಧಿತ ಮಾಹಿತಿ ವಿವರಗಳನ್ನು ಹಂಚಿಕೊಳ್ಳಬೇಕಿದೆ.

ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಸಚಿವರು, ವಿದ್ಯಾರ್ಥಿಗಳು ಗ್ರಾಮೀಣ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್, ಮಣ್ಣು ಮತ್ತು ನೀರಿನ ಸಂರಕ್ಷಣೆ, ಸಮಗ್ರ ಕೃಷಿಗೆ ಹೆಚ್ಚು ಒತ್ತು, ಸಾವಯವ ಕೃಷಿ ಹಾಗೂ ರೈತ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

About Author

More Stories

You may have missed