AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಬೆಳ್ತಂಗಡಿ ತಾಲ್ಲೂಕಿನ ಕುಂಟಾಲ ಪಲ್ಕೆ ಸಮೀಪ ಗುಡ್ಡ ಕುಸಿತ : ವಾಹನ ಸಂಚಾರ ಸ್ಥಗಿತ.”

1 min read

ದಕ್ಷಿಣ ಕನ್ನಡ (Dakshina Kannada) : ಜಿಲ್ಲೆಯ ಬೆಳ್ತಂಗಡಿ (Belthangady) ತಾಲ್ಲೂಕಿನಾದ್ಯಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದ್ದು,ಮಳೆಯ ಅಬ್ಬರದ ಪರಿಣಾಮ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ.

ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ.ಘಟನೆ ನಡೆದ ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಮತ್ತು ಪಂಚಾಯತ್ ಸದಸ್ಯರು ಭೇಟಿ ನೀಡಿದ್ದಾರೆ.

ಸದ್ಯ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದ ಮಣ್ಣು ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಕಾರ್ಯಾಚರಣೆ ಮುಗಿಯುವವರೆಗೂ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

✍️ಬರಹ ಕೃಪೆ.✍️

ಸಿದ್ದಿಕ್ ಚಕ್ಕಮಕ್ಕಿ.

7847891857.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

 

 

About Author

Leave a Reply

Your email address will not be published. Required fields are marked *