लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅವಿನ್ ಟಿವಿ ಸುದ್ದಿಜಾಲ ✍️: ಭದ್ರಾ ನದಿಗೆ ಹಾರಿ ನರ್ಸ್ ರಾನ್ಯಾ ಸಾವಿಗೆ ಶರಣು.

ನ ರಾ ಪುರ ಏ ೦೭: ನರ್ಸ್ ಒಬ್ಬರು ಹೊಳೆಗೆ ಹಾರಿ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರಾನ್ಯಾ ಬೇಸಿಲ್ (೩೦) ಎಂದು ಗುರುತಿಸಲಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದ ರಾನ್ಯಾ ಬೇಸಿಲ್ ಅವರ ಕುಟುಂಬ ಒಂದು ಸುಂದರವಾದ ಕುಟುಂಬವಾಗಿತ್ತು,ಪತಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಹೊಂದಿರುವ ರಾನ್ಯಾ ಅವರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ನಿವಾಸಿಯಾಗಿದ್ದು, ಹೊಳೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ರಾನ್ಯಾ ಸಾವಿಗೆ ಶರಣಾಗಿದ್ದು, ಅವರು ಶಿವಮೊಗ್ಗದ ನಗರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ ಶುಶ್ರೂಷಕಿಯಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬಂದಿದ್ದ ರನ್ಯಾ ಮತ್ತೆ ಮನೆಯಿಂದ ವಾಪಸ್ ಹೋಗಿ ಹೊಳೆಗೆ ಹಾರಿ ಶರಣಾಗಿದ್ದಾರೆ.

ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
•••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ….. ✍️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed