AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಭಾರತದ ಅಮೂಲ್ಯ ಕಂಠ ಎಸ್ ಜಾನಕಿ ಅವರಿಗೆ ಭಾರತರತ್ನ ಗೌರವ ಸಲ್ಲಿಕೆ ಆಗಬೇಕು:

1 min read

ಅವಿನ್ ಟಿವಿ ಸುದ್ದಿಜಾಲ ✍️: ಭಾರತದ ಅಮೂಲ್ಯ ಕಂಠ ಎಸ್ ಜಾನಕಿ ಅವರಿಗೆ ಭಾರತರತ್ನ ಗೌರವ ಸಲ್ಲಿಕೆ ಆಗಬೇಕು: ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಆಗ್ರಹ.

ಚಿಕ್ಕಮಗಳೂರು ಜು 15, ದೇಶದ ಅತ್ಯುನ್ನತ ನಾಗರೀಕ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಇತ್ತೀಚೆಗೆ ನಿಧನರಾದ ಚಲನಚಿತ್ರ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ಮರಣೋತ್ತರವಾಗಿ ನೀಡುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರನ್ನು ಮಂಗಳವಾರ ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಎಸ್.ಜಾನಕಿ ಅವರು ಭಾರತೀಯ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ, ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಜಪಾನಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ ಜನಜನಿತಮಾಡಿ,
ತಮ್ಮ ಸುಮಧುರ ಕಂಠದಿಂದ ಭಾರತೀಯ ಸಂಗೀತ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಮನವಿಯಲ್ಲಿ ಹೇಳಿದ್ದಾರೆ.

ಅತ್ಯಂತ ಮೇರು ಗಾಯಕಿಯಾಗಿದ್ದ ಎಸ್ ಜಾನಕಿ ಅವರು ಸರಳ ಸಜ್ಜನಿಯ ಜೀವನಕ್ಕೆ ಮಾದರಿಯಾಗಿದ್ದರು, ಎಸ್.ಜಾನಕಿ ಅವರಿಗೆ ನಾಲ್ಕು ಬಾರಿ ಅತ್ಯುತ್ತಮ ಹಿನ್ನೆಲೆ ಗಾಯಕಿ ರಾಷ್ಟ್ರ ಪ್ರಶಸ್ತಿ, ವಿವಿಧ ರಾಜ್ಯಗಳ 28ಕ್ಕೂ ಹೆಚ್ಚು ಪ್ರಶಸ್ತಿಗಳು ಲಭಿಸಿವೆ ಎಂದಿರುವ ಅವರು ಈ ಅಮರ ಗಾಯಕಿಯ ಹೆಸರು ಮತ್ತು ಕೊಡುಗೆ ಹೊಸ ತಲೆಮಾರಿನ ಮನದಲ್ಲಿ ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಅವರ ಅಪೂರ್ವ ಸಾಧನೆಯನ್ನು ಗೌರವಿಸಿ ಭಾರತರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮು ನಾಯಕ್, ಸಂಘಟನಾ ಕಾರ್ಯದರ್ಶಿ ರೂಪೇಶ್, ಪದಾಧಿಕಾರಿಗಳಾದ ದೌಲತ್ ಭಾಷಾ, ರವಿ, ಆಣೂರು ಶಿವು ಹಾಜರಿದ್ದರು.
••••••••••••••••
ಡಿ ಎಂ ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ….. ✍️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed