लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮದ್ಯದ ಅಮಲಿನಲ್ಲಿ ತಂದೆಯಿಂದಲೇ ಪುತ್ರನ ಭೀಕರ ಹತ್ಯೆ

ಮಚ್ಚಿನಿಂದ ಕೊಚ್ಚಿ ಕೊಲೆ: ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ
ಕೊಟ್ಟಿಗಹಾರ: ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಾರ್ವಜನಿಕರಲ್ಲಿ ಆಘಾತ ಮೂಡಿಸಿದೆ.
ಮೃತ ದುರ್ದೈವಿ ಪ್ರದೀಪ್ ಆಚಾರ್ (29) ಎಂದು ಗುರುತಿಸಲಾಗಿದ್ದು,
ಆರೋಪಿ ತಂದೆ ರಮೇಶ್ ಆಚಾರ್(60)ವರ್ಷ, ಆಗಿದ್ದಾನೆ. ತಂದೆ–ಮಗನ ನಡುವೆ ಕ್ಷುಲಕ ಕಾರಣಕ್ಕೆ ಆಗಾಗ್ಗೆ ಕಲಹ ನಡೆಯುತ್ತಿದ್ದು, ಮದ್ಯಪಾನದ ಚಟದಿಂದಾಗಿ ಮನೆಯಲ್ಲೇ ಗಲಾಟೆ ಸಾಮಾನ್ಯವಾಗಿತ್ತು ಎನ್ನಲಾಗಿದೆ. ಈ ನಿರಂತರ ಕಿರುಕುಳದಿಂದ ಬೇಸತ್ತ ಪ್ರದೀಪ್ ತಾಯಿ ಮನೆ ಬಿಟ್ಟು ಹೋಗಿದ್ದರೆಂದು ತಿಳಿದುಬಂದಿದೆ. ಬಳಿಕ ತಂದೆ–ಮಗ ಇಬ್ಬರೇ ಮನೆಯಲ್ಲಿ ವಾಸವಿದ್ದರು.
ನಿನ್ನೆ ರಾತ್ರಿ ಮದ್ಯದ ಅಮಲಿನಲ್ಲಿ ರಮೇಶ್ ಆಚಾರ್ ತನ್ನ ಪುತ್ರ ಪ್ರದೀಪ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಪ್ರದೀಪ್ ರಕ್ತದ ಮಡುವಿನಲ್ಲಿ ಇಡೀ ರಾತ್ರಿ ಬಿದ್ದು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಬೆಳಗ್ಗೆ ಮಗನ ಮೃತದೇಹವನ್ನು ಮನೆಯ ಹಾಲ್‌ನಿಂದ ಹೊರಾಂಗಣಕ್ಕೆ ಎಳೆದು ತರುತ್ತಿದ್ದ ಆರೋಪಿಯನ್ನು ಕಂಡ ಅಕ್ಕಪಕ್ಕದವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಬಾಳೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಕುಮಾರ್ ದಯಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡ ಬಾಳೂರು ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ಹಾಗೂ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed