AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ಪ್ರಸ್ತಾವನೆ – ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೆ: ಆಮ್ ಆದ್ಮಿ ಪಕ್ಷ ವ್ಯಂಗ್ಯ

1 min read
Featured Video Play Icon

ಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ಪ್ರಸ್ತಾವನೆ – ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೆ: ಆಮ್ ಆದ್ಮಿ ಪಕ್ಷ ವ್ಯಂಗ್ಯ

ಬೆಂಗಳೂರು ಡಿಸೆಂಬರ್‌ 04: ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ಕಟ್ಟಬೇಕು ಎನ್ನುವ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಆಯುಕ್ತರ ನಿರ್ಧಾರ ನೋಡಿದರೆ ನಾವು ಬ್ರಿಟಿಷರ ಆಡಳಿತದಲ್ಲಿ ಇದ್ದೇವೆನೋ ಎನ್ನುವ ಭಾವನೆ ಬರುತ್ತಿದೆ. ಲಗಾನ್ ಸಿನಿಮಾದ ಸಂಭಾಷಣೆ “ತೀನ್ ಗುನಾ ಲಗಾನ್ ಲಗೇಗಾ” ಈ ಸಂದರ್ಭದಲ್ಲಿ ನೆನಪಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ವ್ಯಂಗ್ಯವಾಡಿದರು.

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ವಾಹನಗಳ ಪಾರ್ಕಿಂಗ್ ಹೆಚ್ಚಳ ಮಾಡಲು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಉಸಿರಾಡುವುದಕ್ಕೂ ಬಿಬಿಎಂಪಿ ಶುಲ್ಕ ವಿಧಿಸಬಹುದು ಅಚ್ಚರಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ ಎನ್ನುವುದೇ ಅತ್ಯಂತ ಮೂರ್ಖತನದ ಹಾಗೂ ಅವೈಜ್ಞಾನಿಕ ನಿರ್ಧಾರ ಎಂದರು.

ಈಗಾಗಲೇ ನಗರದ ಅನೇಕ ಕಡೆ ಪಾರ್ಕಿಂಗ್ ದಂಧೆ ನಡೆಯುತ್ತಿದ್ದು ಇದನ್ನೇ ಸರಿಯಾಗಿ ನಿಭಾಯಿಸಲು ಕಷ್ಟ ಪಡುತ್ತಿರುವ ಸರ್ಕಾರ ಇನ್ನು ಇಡೀ ಬೆಂಗಳೂರನ್ನು ಸುಧಾರಿಸುವುದಕ್ಕೆ ಸಾಧ್ಯವೇ ಎಂದು ಹೇಳಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author