ಮಲೆನಾಡಿನ ಕಾಫಿನಾಡಿನಲ್ಲಿ ಕಾಡುಪ್ರಾಣಿ-ಮಾನವ ಸಂಘರ್ಷ ದಿನೇ ದಿನೇ….
1 min read
ಕಳಸ.
ಮಲೆನಾಡಿನ ಕಾಫಿನಾಡಿನಲ್ಲಿ ಕಾಡುಪ್ರಾಣಿ-ಮಾನವ ಸಂಘರ್ಷ ದಿನೇ ದಿನೇ ತೀವ್ರಗೊಳ್ಳುತ್ತಿರುವುದು ಆತಂಕಕ್ಕೆ ಕಾಡುಕೋಣದ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ದುರ್ಘಟನೆ ಕಳಸ ತಾಲೂಕಿನ ಮೈದಾಡಿ ಗ್ರಾಮದ ಯಮಗೊಂಡ ಎಸ್ಟೇಟ್ನಲ್ಲಿ
ಮೃತ ಯುವಕನನ್ನು ಚೇತನ್ (30) ಎಂದು ಗುರುತಿಸಲಾಗಿದೆ. ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಅವರನ್ನು ತಕ್ಷಣವೇ ಕಳಸ ಆಸ್ಪತ್ರೆಗೆ ದಾಖಲಿಸಲಾಗಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ನಂತರ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಎದೆಮಟ್ಟಕ್ಕೆ ಬೆಳೆದ ಮಗನನ್ನು ಕಳೆದುಕೊಂಡ ಇವರ ಗೊಳಾಟ ಮನಕಲಕುವಂತದ್ದು. ಕಳಸ ಭಾಗದಲ್ಲಿ ಕಾಡುಕೋಣ ದಾಳಿಗಳು ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ ಹಲವರು ಗಾಯಗೊಂಡಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಡುಕೋಣ ಹಾವಳಿಗೆ ಶಾಶ್ವತ ಪರಿಹಾರ ಓದಗಿಸಬೇಕೆಂದು ಮಲೆನಾಡಿಗರು ಆಗ್ರಹಿಸುತ್ತಿದ್ದಾರೆ. ಈ ಘಟನೆ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

