ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ:…
1 min read
ಅವಿನ್ ಟಿವಿ ಸುದ್ದಿಜಾಲ ✍️: ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ:
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕಾಕ್ರೋಚ್ ಪಾರ್ಟಿಯ ಹರ್ಷೋದ್ಗಾರ.
ನವದೆಹಲಿ ಜು 25: ಕೇಂದ್ರ ಸರ್ಕಾರದ ಮೊದಲ ವಿಕೆಟ್ ಪತನ,ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ. ಆದರೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಿಜೆಪಿ ತನ್ನ ಪಟ್ಟು ಮುಂದುವರೆಸಿದೆ.
ಇಂದು ಮಧ್ಯಾಹ್ನ ಪ್ರಧಾನ್ ಅವರ ರಾಜೀನಾಮೆ ಘೋಷಣೆಯ ನಂತರ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಸಂತಸ ವ್ಯಕ್ತಪಡಿಸಿದರು.
ಯುವಜನರನ್ನು ಉದ್ದೇಶಿಸಿ ಮಾತನಾಡಿದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ, *“ನಾವು ಸಾಧಿಸಿದ್ದೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ಈ ಸರ್ಕಾರದಲ್ಲಿ ‘ರಾಜೀನಾಮೆಗಳು ಅಸ್ತಿತ್ವದಲ್ಲಿಲ್ಲ’ ಎಂದು ಅವರು ಹೇಳುತ್ತಿದ್ದರು”* ಎಂದರು.
ಇದು ಪ್ರಜಾಪ್ರಭುತ್ವ ದೇಶ, ಇಲ್ಲಿ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ, ವಿದ್ಯಾರ್ಥಿಗಳ ನ್ಯಾಯಪರ ಹೋರಾಟಕ್ಕೆ ಆಳುವ ಸರ್ಕಾರಗಳು ತಲೆಬಾಗಲೇಬೇಕು ಮತ್ತು ಜವಾಬ್ದಾರಿತನದಿಂದ ಉತ್ತರದಾಯಿತ್ವ ನೀಡಬೇಕು, ಹೋರಾಟಕ್ಕೆ ಮಣಿದು ಪ್ರಧಾನ್ ರಾಜೀನಾಮೆ ನೀಡಿದ್ದಾರೆ, ಆದರೆ ನಮಗೆ ಇನ್ನೂ ಎರಡು ಬೇಡಿಕೆಗಳಿವೆ. ನಾವು ಇಷ್ಟಕ್ಕೆ ಸುಮ್ಮನಾಗುವುದಿಲ್ಲ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ ಸಿಗಲೇಬೇಕು ಎಂದು ಆಗ್ರಹಿಸಿದರು.
ಎರಡನೆಯದಾಗಿ ಜುಲೈ 20 ರಂದು ಪೊಲೀಸ್ ಗೂಂಡಾಗಳು ವಿದ್ಯಾರ್ಥಿಗಳ ಮೇಲೆ ಕೃತ್ಯ ಎಸಗಿದ್ದಾರೆ,ಅದಕ್ಕಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ನೆನಪಿಡಿ, ಜಿರಳೆಯೊಂದಿಗೆ ಆಟವಾಡಬೇಡಿ” ಎಂದು ಅಭಿಜೀತ್ ಎಚ್ಚರಿಕೆ ನೀಡಿದ್ದಾರೆ.
*ಸಿಜೆಪಿ ಸರ್ಕಾರಕ್ಕೆ ಇಟ್ಟ ಬೇಡಿಕೆಗಳು*
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಇಂದು ರಾಜಿನಾಮೆ ನೀಡಿದ್ದಾರೆ,ಆದರೆ
ಆತ್ಮಹತ್ಯೆಯಿಂದ ಸಾವನ್ನಪ್ಪಿದ ಎಲ್ಲಾ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ಒಂದು ಕೋಟಿ ಪರಿಹಾರ ನೀಡಬೇಕು,
ಯಾವುದೇ ವಿದ್ಯಾರ್ಥಿ ಮತ್ತು ಪ್ರತಿಭಟನಾಕಾರರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು, ಪರೀಕ್ಷಾ ನೀತಿಯಲ್ಲಿ ಬದಲಾವಣೆ ತರಬೇಕು,
ಆರ್‌ಎಎಫ್ ಮತ್ತು ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆ ಕೇಳಬೇಕು ಎಂಬ ಇನ್ನಷ್ಟು ಬೇಡಿಕೆಗಳು ಬಾಕಿ ಇದ್ದು ಅದರ ಈಡೇರಿಕೆಗಾಗಿ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಕಾಕ್ರೋಚ್ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
•••••••••••••
ಡಿ ಎಂ ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ….. ✍️
ಚಿಕ್ಕಮಗಳೂರು

