लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ ಶ್ರೀ ರಾಮಾಯಣಂ ದರ್ಶನದ ಮೂಲಕ ಜಗತ್ತಿಗೆ ವಂದಿಸಿ ವಿಶ್ವಮಾನವ ಪ್ರಜ್ಞೆಯನ್ನು ಪಸರಿಸಿದವರು ರಾಷ್ಟ್ರಕವಿ ಕುವೆಂಪು…..

1 min read

ಅವಿನ್ ಟಿವಿ ಸುದ್ದಿಜಾಲ ✒️:
ಶ್ರೀ ರಾಮಾಯಣಂ ದರ್ಶನದ ಮೂಲಕ ಜಗತ್ತಿಗೆ ವಂದಿಸಿ ವಿಶ್ವಮಾನವ ಪ್ರಜ್ಞೆಯನ್ನು ಪಸರಿಸಿದವರು ರಾಷ್ಟ್ರಕವಿ ಕುವೆಂಪು.
••••••••••••••••••
ಚಿಕ್ಕಮಗಳೂರು ಡಿ 30, ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಜಾತೀಯತೆ ಅಸಮಾನತೆ ಮತ್ತು ಮೌಡ್ಯಗಳೆಂಬ ರೋಗಗಳಿಗೆ ದಿವ್ಯೌಷಧವಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ.ಜಿಲ್ಲಾ ಯುವ ಘಟಕ, ನಗರ, ಕಸಬಾ ಹೋಬಳಿ ಘಟಕಗಳು ನಗರದ ಕೋಟೆ ಬಡಾವಣೆಯ ಕುವೆಂಪು ಉದ್ಯಾನವನದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಭಕ್ತಿ ಬಂಡಾರಿ ಬಸವಣ್ಣನವರು ಅಸಮಾನತೆ ಮತ್ತು ಮೌಡ್ಯದ ವಿರುದ್ಧ ಹೋರಾಡಿದರೆ, 20ನೇ ಶತಮಾನದಲ್ಲಿ ರಾಷ್ಟ್ರಕವಿ ಕುವೆಂಪು ಅವರು ಅಸಮಾನತೆ ಮತ್ತು ಮೌಡ್ಯದ ವಿರುದ್ಧ ತಮ್ಮ ಕೃತಿಗಳು ಮತ್ತು ಕವಿತೆಗಳ ಮೂಲಕ ಹೋರಾಡಿದರು, ಕನ್ನಡಕ್ಕೆ ಶಕ್ತಿ ತುಂಬಿದವರು ಕುವೆಂಪು ಅವರು ಎಂದು ತಿಳಿಸಿದರು.
ರಾಷ್ಟ್ರಕವಿ ಕುವೆಂಪು ಅವರು ನಮ್ಮ ಜಿಲ್ಲೆಯವರು ಎಂಬ ಹೆಮ್ಮೆ ಜಿಲ್ಲೆಯ ಎಲ್ಲರಿಗೂ ಇರಬೇಕು, ಕುವೆಂಪು ಅವರ ವಿಶ್ವಮಾನವ ಸಂದೇಶ ಮತ್ತು ವಿಚಾರಧಾರೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕುವೆಂಪು ಅವರ ಕೃತಿಗಳಲ್ಲಿ ವಿಶ್ವಮಾನವ ಪ್ರಜ್ಞೆ ವಿಷಯ ಕುರಿತು ಉಪನ್ಯಾಸ ನೀಡಿದ ಐಡಿಎಸ್ ಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ, ಮೋಹನ್ ಮಿರ್ಲೆ ಜಿಲ್ಲೆಯ ಜನರಿಗೆ ಕುವೆಂಪು ಅವರು ನಮ್ಮ ಜಿಲ್ಲೆಯವರು ಎಂಬ ಹೆಮ್ಮೆ ಇದ್ದರೆ ಸಾಲದು, ಅವರ ವಿಶ್ವಮಾನವ ಸಂದೇಶಗಳನ್ನು ಅರಿತು ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು.
ರಾಷ್ಟ್ರಕವಿ ಕುವೆಂಪು ಅವರ ಬದುಕು, ವೈಚಾರಿಕತೆ, ಬರಹಗಳ ಕುರಿತು ವಿವರಿಸಿದ ಮೋಹನ್ ಮಿರ್ಲೆ ನಾವು ದೊಡ್ಡವರಾದ ನಂತರ ಜ್ಞಾನದ ಮುಗ್ಧತೆಯನ್ನು ಹೊಂದಿರಬೇಕು, ಆಗ ಮಾತ್ರ ಕುವೆಂಪು ಅವರ ಆಶಯದಂತೆ ವಿಶ್ವಮಾನವರಾಗಲು ಸಾಧ್ಯವಾಗುತ್ತದೆ ಎಂದರು.
ರಾಷ್ಟ್ರಕವಿ ಕುವೆಂಪು ಅವರು ಪಂಚಮಂತ್ರಗಳಲ್ಲಿ, ಸಪ್ತ ಸೂತ್ರಗಳಲ್ಲಿ ತಮ್ಮ ಕವಿತೆಗಳಲ್ಲಿ ವಿಶ್ವಮಾನವ ಸಂದೇಶವನ್ನು ಸಾರಿದ್ದಾರೆ, ಜಗತ್ತು ಉಳಿಯಬೇಕಾದರೆ ಕುವೆಂಪು ಅವರ ಮನುಜ ಮತ, ವಿಶ್ವಪಥ ನಮ್ಮದಾಗಬೇಕು ಎಂದು ತಿಳಿಸಿದರು.

ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಮಾತನಾಡಿ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು, ಅವರ ವಿಚಾರಧಾರೆಗಳನ್ನು ಎಲ್ಲರೂ ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಮಾವಿನಕೆರೆ ದಯಾನಂದ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಇದಕ್ಕೂ ಮುನ್ನ ವಿಶ್ವಮಾನವ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಉದ್ಘಾಟಿಸಿದರು, ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಅಧ್ಯಕ್ಷೆ ವೀಣಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು, ನಗರಘಟಕದ ಅಧ್ಯಕ್ಷ ಸಚಿನ್ ಸಿಂಗ್ ರಾಷ್ಟ್ರಕವಿಯ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಸಮಾರೋಪ ಸಮಾರಂಭದಲ್ಲಿ ಹಿರೇಮಗಳೂರು ಪುಟ್ಟಸ್ವಾಮಿ ಅವರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು, ಕುವೆಂಪು ಅವರ ವಿಶ್ವಮಾನವ ಸಂದೇಶದ ಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ನಡುವೆ ಹಲವು ಗಾಯಕರಿಂದ ಕುವೆಂಪು ವಿರುಚಿತ ಗೀತೆಗಳ ಗಾಯನ ನಡೆಯಿತು,

ನಗರಸಭೆ ಸದಸ್ಯೆ ಸುಜಾತ ಶಿವಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಗೌರವ ಕಾರ್ಯದರ್ಶಿ ಡಿ. ಎಂ.ಮಂಜುನಾಥಸ್ವಾಮಿ ,ಯುರೆಕಾ ಅಕಾಡೆಮಿಯ ದೀಪಕ್ ದೊಡ್ಡಯ್ಯ. ಪ್ರಭು ಪ್ರಿಂಟರ್ಸ್ ವ್ಯವಸ್ಥಾಪಕ ಪ್ರಭು ಸೂರಿ. ಡಿಸಿಸಿ ಬ್ಯಾಂಕ್ ನಿರ್ದೇಶಕ ಮುಗುಳುವಳ್ಳಿ ಪರಮೇಶ್ವರಪ್ಪ, ಕ ಸಾ ಪ ಜಿಲ್ಲಾ ಗೌರವ ಕಾರ್ಯದರ್ಶಿ ಜಿ.ಬಿ. ಪವನ್, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರಿಯಾಂಕ ಭರತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ವಿಶ್ವನಾಥ್, ತಾಲೂಕು ಕ ಸಾ ಪ ಘಟಕದ ಗೌರವ ಕಾರ್ಯದರ್ಶಿಗಳಾದ ಹಳೇಬೀಡು ಬಸವರಾಜ್, ಟಿ. ಸಂದೀಪ್ ಮತ್ತು ವಳಗೇರಲ್ಲಿ ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ… ✒️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed