लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಹನ್ನೆರಡನೇ ಶತಮಾನದ ವಚನಕಾರರು ತಮ್ಮನ್ನು ತಾವು ಪಕ್ಕಕ್ಕಿಟ್ಟುಕೊಂಡು ಸಮ ಸಮಾಜಕ್ಕಾಗಿ ಲೋಕದ ದನಿಯಾದವರು: ಸಚಿವ ಕೆ ಜೆ ಜಾರ್ಜ್ ಅಭಿಮತ…

1 min read

ಅವಿನ್ ಟಿವಿ ಸುದ್ದಿಜಾಲ ✒️ ಹನ್ನೆರಡನೇ ಶತಮಾನದ ವಚನಕಾರರು ತಮ್ಮನ್ನು ತಾವು ಪಕ್ಕಕ್ಕಿಟ್ಟುಕೊಂಡು ಸಮ ಸಮಾಜಕ್ಕಾಗಿ ಲೋಕದ ದನಿಯಾದವರು: ಸಚಿವ ಕೆ ಜೆ ಜಾರ್ಜ್ ಅಭಿಮತ.

ಚಿಕ್ಕಮಗಳೂರು: ಭಕ್ತಿ ಭಂಡಾರಿ ಬಸವಣ್ಣನವರು ಹಾಗೂ ಶಿವಶರಣರ ಆಶಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಪರ ಕಲ್ಯಾಣ ಕಾರ್ಯಕ್ರಮಗಳೊಂದಿಗೆ ಜನಸ್ನೇಹಿ ಆಡಳಿತ ನೀಡುತ್ತಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ನಿಂದ ನಗರದ ಒಕ್ಕಲಿಗರ ಭವನದಲ್ಲಿ ಮೂರು ದಿನಗಳ ಕಾಲ ನಡೆದ 40ರ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಬುಧವಾರ ಅವರು ಮಾತನಾಡಿದರು.

ಭಕ್ತಿ ಭಂಡಾರಿ ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿದ್ದರು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ನರೇಗಾ ಕಾರ್ಯಕ್ರಮವನ್ನು ರೂಪಿಸಿ ಗ್ರಾಮೀಣ ಅಭಿವೃದ್ಧಿಗೆ ಒತ್ತು ನೀಡಿತ್ತು, ಇನ್ನು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಕ್ಷಣವೇ ಬಸವಣ್ಣನವರು ಪ್ರತಿಪಾದಿಸಿದಂತೆ ಹಸಿವು ನೀಗಿಸುವ ನಿಟ್ಟಿನಲ್ಲಿ ಅನ್ನ ಭಾಗ್ಯ ಯೋಜನೆಯನ್ನು ಘೋಷಿಸಿದರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಲ್ಲದೇ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಕೆಗೆ ಆದೇಶಿಸಿದರು ಎಂದರು.

ದಾಸೋಹ ಎಂದರೆ ಉತ್ಪಾದನೆ ಮತ್ತು ವಿನಿಯೋಗ, ಈ ನಿಟ್ಟಿನಲ್ಲಿ ಮಹಿಳೆಯರು ಮತ್ತು ಬಡವರಿಗೆ ಆರ್ಥಿಕ ಶಕ್ತಿ ತುಂಬಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ, ಬಸವಾದಿ ಶರಣರ ಆಶಯಕ್ಕೆ ತಕ್ಕಂತೆ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಬಸವಣ್ಣನವರು ಸಮಾಜದ ಪರಿವರ್ತನೆಗೆ ವಚನ ಚಳುವಳಿಯೇ ಪರಿಹಾರ ಎಂದು ಒತ್ತಿ ಹೇಳಿದ್ದರು, ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆದರ್ಶದ ಬದುಕನ್ನು ರೂಪಿಸಿಕೊಳ್ಳಬಹುದು, ವಚನಗಳ ಅಧ್ಯಯನ ವ್ಯಕ್ತಿ ಮತ್ತು ಸಮಾಜದಲ್ಲಿ ಧನಾತ್ಮಕ ಬದಲಾವಣೆ ತರಲಿದೆ, 12ನೇ ಶತಮಾನದ ವಚನಕ್ರಾಂತಿಯಿಂದ ಸಾಮಾಜಿಕ ಪರಿವರ್ತನೆಗೆ ದಾರಿ ಆಯಿತು, 21ನೇ ಶತಮಾನದಲ್ಲೂ ಸಾಮಾಜಿಕ ಬದಲಾವಣೆಯ ಕ್ರಾಂತಿಯಾಗಬೇಕು ಆ ನಿಟ್ಟಿನಲ್ಲಿ ಶರಣ ಸಾಹಿತ್ಯ ಪರಿಷತ್ತು ಕಾರ್ಯೋನ್ಮುಕವಾಗಬೇಕು ಎಂದು ಹೇಳಿದರು.
ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೇ ಶರಣರ ವಿಚಾರಧಾರೆ ಗಳನ್ನು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳ ಮೂಲಕ ವಚನ ಜ್ಞಾನವನ್ನು ಜನರಿಗೆ ನೀಡಲಾಗುತ್ತಿದೆ, ಶರಣರ ವಿಚಾರಧಾರೆಗಳು ಸಾರ್ವಕಾಲಿಕವಾದವುಗಳು, ಅವುಗಳನ್ನು ರಾಜ್ಯ, ಹೊರರಾಜ್ಯ ಮತ್ತು ಹೊರದೇಶಗಳಲ್ಲಿ ಪ್ರಚಾರ ಮಾಡುವ ನಿಟ್ಟಿನಲ್ಲಿ ಶರಣ ಸಾಹಿತ್ಯ ಪರಿಷತ್ತು ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಸಲಹೆ ಮಾಡಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಸಿ. ಸೋಮಶೇಖರ್ ಮಾತನಾಡಿ ಅಧಿಕಾರಿಗಳಿಗೆ ಮತ್ತು ರಾಜಕಾರಣಿಗಳಿಗೆ ಸಾಹಿತ್ಯದ ಒಲವು ಇದ್ದರೆ ಮನುಷ್ಯರಾಗಿರುತ್ತಾರೆ, ಮತ್ತು ಜನಪರವಾಗಿರುತ್ತಾರೆ, ಸರ್ಕಾರಗಳು ನಡೆಸುವ ಜನಸ್ಪಂದನ ಕಾರ್ಯಕ್ರಮದ ಮೂಲ ಆಶಯವನ್ನು ಹುಡುಕಿದ್ದು ಬಸವಣ್ಣನವರು, ಆಡಳಿತ ಸ್ಪಷ್ಟರೂಪ ನೀಡಿದವರು ಬಸವಣ್ಣನವರು, ಆತ್ಮಕಲ್ಯಾಣದಷ್ಟು ಲೋಕಕಲ್ಯಾಣಕ್ಕೆ ಒತ್ತು ನೀಡಿದ್ದರಿಂದ ಬಸವಾದಿ ಶರಣರು ಸಾವಿರಾರು ವರ್ಷಗಳಾದರೂ ಇನ್ನೂ ಪ್ರಸ್ತುತರಾಗುತ್ತಾರೆ, ಕಳಬೇಡ, ಕೊಲಬೇಡ, ಹುಸಿಯ ನುಡಿಯಲುಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ ಈ ಒಂದು ವಚನ ಬಸವಣ್ಣನವರು ಇಡೀ ಜಗತ್ತಿಗೆ ನೀಡಿದ ಸಂವಿಧಾನ ಎಂದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮೂರು ದಿನಗಳ ಕಾಲ ಅಚ್ಚುಕಟ್ಟಾಗಿ ಅನ್ನದಾಸೋಹ ಮತ್ತು ಜ್ಞಾನದಾಸೋಹವನ್ನು ಯಶಸ್ವಿಯಾಗಿ ಉಣ ಬಡಿಸಿದೆ ಎಂದು ಶ್ಲಾಘಿಸಿ ಧನ್ಯವಾದ ಅರ್ಪಿಸಿದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ ಅಸಮಾನತೆ, ಜಾತಿಯತೆ, ಭ್ರಷ್ಟಾಚಾರ ಇಂದು ಸಮಾಜದಲ್ಲಿ ತುಂಬಿತುಳುಕುತ್ತಿದೆ, ಈ ವೇಳೆ ಸಮಾಜವನ್ನು ತಿದ್ದುವ ಕೆಲಸವನ್ನು ಮಠಾಧೀಶರುಗಳು ಮಾಡಬೇಕಾಗಿದೆ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಮಾತನಾಡಿ ಲಿಂಗಾಯಿತ ಜಾತಿಯಲ್ಲ ಅದೊಂದು ಧರ್ಮ, ಅದರಲ್ಲಿ ಮಾನವೀಯ ಮೌಲ್ಯಗಳಿವೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ್ ಕ್ಯಾತನಬೀಡು ಮನುಷ್ಯತ್ವವನ್ನು ಕಳೆದುಕೊಂಡಿರುವ ಇಂದಿನ ದಿನಗಳಲ್ಲಿ ಪ್ರೀತಿ, ಪ್ರೇಮ, ವಿಶ್ವಾಸ, ಸಂಬಂಧಗಳನ್ನು, ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯುವುದರಿಂದ ಜನಮನದಲ್ಲಿ ವಚನಗಳನ್ನು, ಬಸವಾದಿ ಶರಣರ ವಿಚಾರಧಾರೆಗಳನ್ನು ಬಿತ್ತಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಾಹಿತಿ ಡಾ ಬಸವರಾಜ ಸಾದರ ಸಮಾರೋಪ ನುಡಿಗಳನ್ನಾಡಿದರು, ಬಸವರಾಜ ಸಾದರ ಅವರ ಕಾಯ ಕಾರ್ಥ ಕ್ರಾಂತಿ ಪುಸ್ತಕವನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು, ರಾಜೇಶ್ವರಿ ಸಾಧರ, ಕವಿತಾ ಸಾದರ ಅವರಿಂದ ಹಿಂದುಸ್ತಾನಿ ಗಾಯನ, ಪ್ರಜ್ಞಾ ಪಶುಪತಿ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಎಐಸಿಸಿ ಸದಸ್ಯ ಬಿ.ಎಂ.ಸಂದೀಪ್, ಸಿಡಿಎ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಕಾಂಗ್ರೆಸ್ ಮುಖಂಡ ಎಂ.ಎಲ್. ಮೂರ್ತಿ, ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಬಿಜೆಪಿ ಮುಖಂಡ ಕಲ್ಮರುಡಪ್ಪ, ಬಿ.ಎಂ.ರುದ್ರಸ್ವಾಮಿ, ಸುಶೀಲಾ ಸೋಮಶೇಖರ್,ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರ ಗುರು ಶಾಂತಪ್ಪ, ಖಜಾಂಚಿ ನಟರಾಜ್ ಎಸ್ ಕೊಪ್ಪಲು, ಪ್ರಧಾನ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ, ಜಿಲ್ಲಾ ಸಂಚಾಲಕ ಪಿ.ಎಂ. ವಿಜಯಕುಮಾರ್, ಜಾನ್ ಸಾಲೆ ರವಿ,, ಲಕ್ಯಾ ಸಂತೋಷ್, ನಿರಂಜನ್, ಶಿವಶಂಕರ್ ವಿರೂಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.
••••••••••••••••°
ಡಿ.ಎಂ. ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ… ✒️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed