ಹರೀಶ್ ಪದವಿ ಪೂರ್ವ ಕಾಲೇಜಿಗೆ ಶೇಕಡಾ 100% ಫಲಿತಾಂಶ
1 min read
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಪರೀಕ್ಷಾ ಮಂಡಳಿ ಪ್ರಕಟಿಸಿದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೂಡಿಗೆರೆಯ ಹರೀಶ್ ಪಿಯು ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 100%ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ವಿಜ್ಞಾನ ವಿಭಾಗದಲ್ಲಿ ಮೌಲ್ಯ ರಾಜ್ಯಕ್ಕೆ 11ನೇ ಹಾಗೂ ವಾಣಿಜ್ಯ ವಿಭಾಗದಲ್ಲಿ ಮಮ್ಮದ್ ಅಮ್ಮಾನ್ ಹಸನ್ 9ನೇ ರ್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ವ್ಯವಸ್ಥಾಪಕರಾದ ಹರೀಶ್ ಅಭಿನಂದಿಸಿದ್ದಾರೆ.



