day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕು : ಹೆಚ್.ಟಿ.ಮೋಹನ್ ಕುಮಾರ್.” – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

“ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕು : ಹೆಚ್.ಟಿ.ಮೋಹನ್ ಕುಮಾರ್.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕಾಫಿ ಬೆಳಗಾರರು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಎಲ್ಲ ಸವಾಲುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದರೆ ಬೆಳಗಾರರು ಸಂಘಟಿತರಾಗಬೇಕೆಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಚ್ ಟಿ. ಮೋಹನ್ ಕುಮಾರ್ ಹೇಳಿದರು.

ದಿನಾಂಕ 06/06/2023ರ ಮಂಗಳವಾರದಂದು ಮೂಡಿಗೆರೆ ಪ್ಲಾಂಟರ್ಸ್ ಕ್ಲಬ್ ಆವರಣದಲ್ಲಿ ಮೂಡಿಗೆರೆ ಬೆಳಗಾರರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಬೆಳೆಗಾರರ ಒಕ್ಕೂಟದ 25ನೇ ಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸರ್ಕಾರವು ಕಾಫಿ ಬೆಳೆಗಾರರ ನೆರವಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ, ರಾಷ್ಟ್ರದ ವಿದೇಶಿ ವಿನಿಮಯದಲ್ಲಿ ಕಾಫಿ ಬೆಳಗಾರರ ಪಾತ್ರ ಪ್ರಮುಖವಾಗಿದೆ. ಇಂದು ಪ್ರಕೃತಿ ವಿಕೋಪದ ಕಾರಣದಿಂದ, ಮಾರುಕಟ್ಟೆ ಏರಿಳಿತದ ಕಾರಣದಿಂದ, ಕಾಫಿ ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಬೆಳೆಗಾರರು ತೀವ್ರ ನಷ್ಟವನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಫಿ ಬೆಳೆಗಾರರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಗ್ರಹಿಸಿದರು.

ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಮಾತನಾಡಿ ಸರ್ಕಾರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಬೆಳೆಗಾರರಿಗೆ ನೀಡುವ ಕಾಯ್ದೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅನುಮೋದನೆ ದೊರೆತಿದೆ.ಇದೀಗ ಅದರ ಅನುಷ್ಠಾನದ ವಿಚಾರವಾಗಿ ವಿಶೇಷವಾಗಿ ಅರಣ್ಯ ಮತ್ತು ಕಂದಾಯ ಭೂಮಿ ವಿಷಯದಲ್ಲಿ ಇರುವ ತಡೆಯನ್ನು ಸರ್ಕಾರ ನಿವಾರಿಸಬೇಕು. ಕಾಫಿ ಬೆಳಗಾರರಿಗೆ 10 ಹೆಚ್.ಪಿ. ವರೆಗಿನ ವಿದ್ಯುತ್ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಬೇಕು,ಕಾಡಾನೆ ಮತ್ತು ಮಾನವ ಸಂಘರ್ಷದ ವಿಷಯದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರವನ್ನು ಒತ್ತಾಯ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಈ ಹಿಂದಿನ ಸಭೆಯ ನಡವಳಿಗಳನ್ನು ಓದಲಾಯಿತು,ಹಣಕಾಸಿನ ವಿಷಯದ ಬಗ್ಗೆ ಮತ್ತು ಮುಖ್ಯವಾದ ಪತ್ರ ವ್ಯವಹಾರಗಳ ಬಗ್ಗೆ ಚರ್ಚಿಸಲಾಯಿತು. ಬೆಂಗಳೂರಿನಲ್ಲಿ ನಡೆಯಲಿರುವ ವಿಶ್ವ ಕಾಫಿ ಸಮ್ಮೇಳನದ ಬಗ್ಗೆ,ಬೆಳೆಗಾರ ಪತ್ರಿಕೆಯ ಬೆಳವಣಿಗೆಯ ಬಗ್ಗೆ ಸಭೆಗೆ ಮಾಹಿತಿ ನೀಡಲಾಯಿತು.ಬ್ಯಾಂಕುಗಳು ಬೆಳೆಗಾರರನ್ನು ವಿವಿಧ ರೀತಿಯಲ್ಲಿ ಶೋಷಣೆ ಮಾಡುತ್ತಿರುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಬೆಳೆಗಾರರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ಈ ಸಭೆಯಲ್ಲಿ ಕರ್ನಾಟಕ ಬೆಳಗಾರರ ಸಂಘದ ಕಾರ್ಯದರ್ಶಿ ಕೆ.ಬಿ ಕೃಷ್ಣಪ್ಪ, ಖಜಾಂಚಿ ಎಚ್. ಎಂ. ಉಪಾಧ್ಯಕ್ಷರಾದ ಬಿ. ಎಂ. ನಾಗರಾಜ್ ಎ.ಕೆ ವಸಂತೇಗೌಡ, ಸಂಘಟನಾ ಕಾರ್ಯದರ್ಶಿಗಳಾದ ಎ.ಎನ್. ನಾಗರಾಜು, ಕೆ.ವಿ. ನರೇಂದ್ರ, ಮೂಡಿಗೆರೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮನೋಹರ್, ಕೆಜಿಎಫ್ ನ ಮಾಜಿ ಅಧ್ಯಕ್ಷರಾದ ಜಗನ್ನಾಥ್ ಬಿ.ಎಸ್. ಜಯರಾಮ್, ಸಹಕಾರಿ ಮುಖಂಡರಾದ ಹಳಸೆ ಶಿವಣ್ಣ ಮುಂತಾದವರು ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ತಾಲೂಕು ಮತ್ತು ಹೋಬಳಿ ಬೆಳೆಗಾರರ ಸಂಘದ ಪ್ರತಿನಿಧಿಗಳು ಭಾಗವಹಿಸಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *