day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಶ್ರೀ ಜಗದೀಶ್ ಶೆಟ್ಟರ್ ಕರೋನಾ ಸಂಧರ್ಭದಲ್ಲಿ “ರೆಸಿಯಲೆಂಟ್ ಕರ್ನಾಟಕ” ವಿಡಿಯೋವನ್ನು ಬಿಡುಗಡೆಗೊಳಿಸಿದರುavintvcom – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಶ್ರೀ ಜಗದೀಶ್ ಶೆಟ್ಟರ್ ಕರೋನಾ ಸಂಧರ್ಭದಲ್ಲಿ “ರೆಸಿಯಲೆಂಟ್ ಕರ್ನಾಟಕ” ವಿಡಿಯೋವನ್ನು ಬಿಡುಗಡೆಗೊಳಿಸಿದರುavintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮಾನ್ಯ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಅವರು ಕರೋನಾ ಮಹಾಮಾರಿಯ ಸಂಧರ್ಭದಲ್ಲಿ  ಕೈಗಾರಿಕಾಭಿವೃದ್ದಿಗೆ ಹಾಗೂ ಬಂಡವಾಳ ಆಕರ್ಷಣೆಗೆ ತಗೆದುಕೊಂಡಿರುವ ಕ್ರಮಗಳ ಬಗ್ಗೆ ತಯಾರಿಸಲಾಗಿರುವ “ರೆಸಿಯಲೆಂಟ್‌ ಕರ್ನಾಟಕ” ಎನ್ನುವ  ವಿಡಿಯೋವನ್ನು ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣಾ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ಹೆಚ್‌ ಎಂ ರೇವಣ್ಣಗೌಡ, ಎಫ್‌ಕೆಸಿಸಿಐ ಅಧ್ಯಕ್ಷ ಪೇರಿಕಲ್ ಎಂ ಸುಂದರ್ – ಕಾಸಿಯಾ ಅಧ್ಯಕ್ಷ ಅರಸಪ್ಪ  ಭಾಗವಹಿಸಿದ್ದರು.

ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರಿಂದ “ರೆಸಿಲಿಯಂಟ್‌ ಕರ್ನಾಟಕ’ ಚಿತ್ರ ಬಿಡುಗಡೆ

-ಲಾಕ್‌ಡೌನ್‌ ವೇಳೆ ಉತ್ಪಾದನೆಗೆ ತೊಡಕಗಾದಂತೆ ಕೈಗೊಂಡ ಕ್ರಮಗಳ ಕುರಿತ ಚಿತ್ರ

ಬೆಂಗಳೂರು ನವೆಂಬರ್‌ 11: ರಾಷ್ಟ್ರವ್ಯಾಪಿ ಲಾಕ್ಕ್‌ಡೌನ್ ಘೋಷಣೆ ಆಗಿದ್ದ ಸಂದರ್ಭದಲ್ಲಿ ಕೈಗಾರಿಕಾ ಚಟುವಟಿಕೆಗಳ ಸುಗಮ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತ ಚಿತ್ರ ‘ರೆಸಿಲಿಯಂಟ್‌ ಕರ್ನಾಟಕ’ ವನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್‌ ಬುಧವಾರ ಬಿಡುಗಡೆ ಮಾಡಿದರು.

“ಕಳೆದ 8 ತಿಂಗಳಿಂದೀಚೆಗೆ ಇಡೀ ಜಗತ್ತು ಬದಲಾಗಿದೆ.  ಕೊವಿಡ್‌ ವಿರುದ್ಧದ ಹೋರಾಟದ ಜತೆಗೆ, ಆರ್ಥಿಕತೆಗೆ ಹೊಡೆತ ಬೀಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ.  ಕೊವಿಡ್‌ ಸಮಯದಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಕೊರತೆ ಆಗದಂತೆ ಎಚ್ಚರವಹಿಸಲಾಗಿತ್ತು. ಈ ಎಲ್ಲ ವಿಷಯಗಳನ್ನು ಚಿತ್ರ ಒಳಗೊಂಡಿದೆ,”ಎಂದು ಸಚಿವರು ತಿಳಿಸಿದರು.

“ಲಾಕ್‌ಡೌನ್‌ ಇದ್ದಾಗಲೂ ಉತ್ಪಾದನೆಗೆ ತೊಡಕಗಾದಂತೆ ಉದ್ಯಮಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗಿತ್ತು.  ಜನಜೀವನ ಹಾಗೂ ಆರ್ಥಿಕತೆ ನಡುವೆ ಸಮತೋಲನ ಕಾಯ್ದುಕೊಂಡಿದ್ದೇವೆ. ಹಾಗಾಗಿಯೇ ಕರ್ನಾಟಕ ಈಗಲೂ ಹೂಡಿಕೆದಾರರ ಮೆಚ್ಚಿನ ತಾಣ. ಕೈಗಾರಿಕಾ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯ ನಮ್ಮದು. ಹಲವು ವಲಯಗಳಲ್ಲಿ ನಾವು ಮುಂಚೂಣಿ ಸಾಧಿಸಿದ್ದೇವೆ,”ಎಂದು ಅವರು ತಿಳಿಸಿದರು.

“ಹೂಡಿಕೆದಾರರನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಹೊಸ ಕೈಗಾರಿಕಾ ನೀತಿ 2020-2025 ಪರಿಚಯಿಸಿದೆ. ಜತೆಗೆ ಕಾರ್ಮಿಕ ಕಾನೂನಿನಲ್ಲಿ ತಂದಿರುವ ಸುಧಾರಣೆಗಳು,  ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಹೊಸ ನೀತಿ ನೆರವಾಗಲಿದೆ.  ಆರ್ಥಿಕತೆ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಕೊವಿಡ್‌ ನಡುವೆಯೂ ಆರ್ಥಿಕ ಚಟುವಟಿಕೆಗಳನ್ನು ಬೆಂಬಲಿಸುವ ಮೂಲಕ ಆರ್ಥಿಕ ಪುನಶ್ಚೇತನಗೊಳಿಸಲು ರಾಜ್ಯ ಹಲವಾರು ಕ್ರಮಗಳನ್ನ ಕೈಗೊಂಡಿದೆ. ಹೂಡಿಕೆ ಸ್ನೇಹಿ ನೀತಿ ಹಾಗೂ ಪೂರಕ ಸೌಲಭ್ಯ, ಭತ್ಯೆ ಒದಗಿಸುವ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಕಂಪನಿಗಳನ್ನು ಆಹ್ವಾನಿಸುತ್ತೇವೆ,”ಎಂದು ಹೇಳಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ  ಗೌರವ್ ಗುಪ್ತ,  ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ರೇವಣ್ಣಗೌಡ, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ, ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಸುಂದರ್, ಜಿಇ ಮುಖ್ಯಸ್ಥ ಮಹೇಶ್‌ ಕಪ್ರಿ,  ವೊಲ್ವೊ ವ್ಯವಸ್ಥಾಪಕ ನಿರ್ದೇಶಕ ಕಮಲ್‌ ಬಾಲಿ, ವಿಸ್ಟ್ರಾನ್‌ ವ್ಯವಸ್ಥಾಪಕ ನಿರ್ದೇಶಕ ಸುದಿಪ್ತೋ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೋಟ್‌

ಲಾಕ್‌ಡೌನ್‌ ಸಮಯದಲ್ಲಿ  ಕೈಗಾರಿಕೆಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕೈಗೊಂಡ ಕ್ರಮಗಳನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ.  ಅಗತ್ಯ ವಸ್ತುಗಳ ಉತ್ಪಾದಿಸುವ ಕೈಗಾರಿಕೆಗಳಿಗೆ ಸರಬರಾಜು ಸರಪಳಿಯು ತೊಂದರೆ ಆಗದಂತೆ ಎಚ್ಚರವಹಿಸಲಾಗಿದೆ. ಕೋವಿಡ್ ಆರಂಭಿಕ ದಿನಗಳಲ್ಲೂ ರಾಜ್ಯ ಸರ್ಕಾರ ಏರೋಸ್ಪೇಸ್ ಮತ್ತು ರಕ್ಷಣಾ ಸಂಸ್ಥೆಗಳ ಕಾರ್ಯಾಚರಣೆಗೆ ಅಗತ್ಯ ಬೆಂಬಲ ಒದಗಿಸಿತ್ತು.

– ಗೌರವ್ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ

About Author