day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ತುಡುಕೂರು ಮಂಜುನಾಥಿಗೆ‌ ಜಿಲ್ಲಾಡಳಿತದಿಂದ ನೋಟೀಸ್ : ಹಿಂದೂ ಕಾರ್ಯಕರ್ತರ ಆಕ್ರೋಶ.” – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

“ತುಡುಕೂರು ಮಂಜುನಾಥಿಗೆ‌ ಜಿಲ್ಲಾಡಳಿತದಿಂದ ನೋಟೀಸ್ : ಹಿಂದೂ ಕಾರ್ಯಕರ್ತರ ಆಕ್ರೋಶ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕೆಲ ತಿಂಗಳ ಹಿಂದೆ ಮಂಗಳೂರಿನ ಐವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ರಾಜ್ಯ ಸರಕಾರ ಇದೀಗ ಚಿಕ್ಕಮಗಳೂರು ಜಿಲ್ಲೆಯ ಓರ್ವ ಹಿಂದೂ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ. ಭಜರಂಗದಳ ಮಾಜಿ ಸಂಚಾಲಕ ತುಡುಕೂರು ಮಂಜುನಾಥ್ ಅವರನ್ನು ಗಡಿಪಾರು ಮಾಡಿ ಮಾರ್ಚ್ 6ರಂದು ಜಿಲ್ಲಾಡಳಿತ ಆದೇಶ ಹೊರಡಿಸಿದ್ದು,ಮಾರ್ಚ್ 14ರಂದು ಜಿಲ್ಲಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

ತುಡುಕೂರು ಮಂಜು ಬಿಜೆಪಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು, ರಾಜಕೀಯ ಮಹತ್ವಾಕಾಂಕ್ಷೆ ಹೊಂದಿದ್ದಾನೆ.ಚಿಕ್ಕಮಗಳೂರು ಜಿಲ್ಲೆಯು ಮತೀಯ ಸೂಕ್ಷ್ಮ ಪ್ರದೇಶವಾಗಿದ್ದು,ರಾಜಕೀಯ ಲಾಭಕ್ಕೋಸ್ಕರ ಮತೀಯ ಗಲಭೆಯನ್ನುಂಟುಮಾಡುವ ಸಾಧ್ಯತೆ ಇದೆ. ಅಲ್ಲದೆ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ ವಿಷಯದಲ್ಲಿ ಮಧ್ಯೆ ಪ್ರವೇಶಿಸುತ್ತಿದ್ದು,ಈ ವಿಚಾರದಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಲದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣ ಸೇರಿದಂತೆ ಒಟ್ಟು 17 ಕಾರಣಗಳನ್ನು ನೀಡಿ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ,ಆಲ್ದೂರು ಹೋಬಳಿ ತುಡುಕೂರು ಗ್ರಾಮದ ನಿವಾಸಿಯಾಗಿರುವ ತುಡುಕೂರು ಮಂಜು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ,ನೆಮ್ಮದಿ ಹಾಗೂ ಭದ್ರತೆಗೆ ಭಂಗ ಮಾಡಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ.ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲು ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಮಂಜುನಾಥ್ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ಮತ್ತು 7 ಮುಂಜಾಗ್ರತಾ ಪ್ರಕರಣಗಳು ದಾಖಲಾಗಿವೆ.ಅಮಾಯಕ ಯುವ ಜನರನ್ನು ಪ್ರಚೋದಿಸಿ ಅವರಲ್ಲಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ.ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು,ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು,ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ.

ಹಿಂದೂ ಕಾರ್ಯಕರ್ತರ ಆಕ್ರೋಶ.

ತುಡುಕೂರು ಮಂಜುನಾಥ ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕನಾಗಿದ್ದು, ಮಂಜುನಾಥ್ ವಿರುದ್ಧ 24 ಪ್ರಕರಣ ದಾಖಲಾಗಿವೆ. ಈ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರನ್ನ ಟಾರ್ಗೆಟ್ ಮಾಡುತ್ತಿದ್ದು, ಚುನಾವಣೆ ಸಮಯದಲ್ಲಿ ಸೋಲಿನ ಭಯದಿಂದ ಹಿಂದೂ ಕಾರ್ಯಕರ್ತರನ್ನು ಬಾಯಿಮುಚ್ಚಿಸಲು ಇಂತಹ ಪ್ರಯತ್ನಕ್ಕೆ ಮುಂದಾಗಿದೆ. ಜಿಲ್ಲಾಡಳಿತ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದೆ. ತುಡುಕೂರು ಮಂಜು ಅವರಿಗೆ ನೀಡಿರುವ ನೋಟಿಸನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದೇ ಹೋದರೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಡಳಿತದ ಕ್ರಮಕ್ಕೆ ಹಿಂದೂ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ನೋಟಿಸ್‌ಗೆ ತುಡಕೂರು ಮಂಜು ಆಕ್ರೋಶ ಹೊರಹಾಕಿದ್ದಾರೆ. ನೋಟಿಸ್‌ಗೆ ಉತ್ತರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಆದರೆ ಈಗಾಗಲೇ 24 ಪ್ರಕರಣಗಳಲ್ಲಿ 20 ಪ್ರಕರಣಗಳು ಜಿಲ್ಲಾ ನ್ಯಾಯಾಲಯದಲ್ಲಿ ಖುಲಾಸೆ ಆಗಿದೆ. ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ಚುನಾವಣಾ ಸಮಯದಲ್ಲಿ ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕೆಲ್ಲ ವಕೀಲರ ಮೂಲಕ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *