day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj “ಲೋಕಾ ಚುನಾವಣೆ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕೆ.” – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

“ಲೋಕಾ ಚುನಾವಣೆ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕೆ.”

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಒಂದು ಅವಧಿಗೆ ಮಾತ್ರ ಸಚಿವರಾಗಿ (ಮೀನುಗಾರಿಕೆ ಮತ್ತು ಬಂದರು) ಕಾರ್ಯನಿರ್ವಹಿಸಿದ್ದರೂ ಮೂರು ದಶಕಗಳ ಬಳಿಕವೂ ಜಿಲ್ಲೆಯ ಜನತೆ ಸಚಿವರಾಗಿ ಅವರ ಕೊಡುಗೆಗಳನ್ನು ನೆನಪಿಸಿಕೊಳ್ಳುವಂಥ ಸಾಧನೆ ಮಾಡಿದ ಅಪರೂಪದ ರಾಜಕಾರಣಿ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ಘೋಷಿಸಿದೆ.

ಇಂದಿನ ರಾಜಕಾರಣಿಗಳಲ್ಲಿ ಕಾಣಲು ಸಿಗದ ಹಲವು ಗುಣಗಳಿಂದಾಗಿ ಪಕ್ಷೇತರ ಅಭ್ಯರ್ಥಿಯಾಗಿ ಅವರು ಸತತ ಎರಡು ಬಾರಿ ಹಿಂದಿನ ಬ್ರಹ್ಮಾವರ ಕ್ಷೇತ್ರದಲ್ಲಿ ಜನರಿಂದ ಚುನಾಯಿತರಾಗಿದ್ದರು ಎಂಬುದನ್ನು ನೆನಪಿಸಿಕೊಂಡರೆ ಕ್ಷೇತ್ರದ ಜನರೊಂದಿಗೆ ಅವರಿಗಿದ್ದ ಅವಿನಾಭಾವ ಸಂಬಂಧವನ್ನು ಅರಿತುಕೊಳ್ಳಬಹುದು.

ರಾಜಕೀಯ ಜೀವನ:

ಜನತಾದಳದಲ್ಲಿ ತನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಿ, 90ರ ದಶಕದಲ್ಲಿ ದಳ ವಿದಳವಾದಾಗ ಯಾವುದೇ ಗುಂಪಿಗೂ ಸೇರದೇ, ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆದ್ದು ಬಂದ ಹೆಗ್ಡೆ, ಕ್ಷೇತ್ರ ಪುನರ್ವಿಂಗಡಣೆಯ ವೇಳೆ ರಾಜಕೀಯ ಕಾರಣಗಳಿಗಾಗಿ ಬ್ರಹ್ಮಾವರ ಕ್ಷೇತ್ರವೇ ಇಲ್ಲವಾದ ಮೇಲೆ ಅನಿವಾರ್ಯವಾಗಿ ಕಾಂಗ್ರೆಸ್ ಸೇರಬೇಕಾದರೂ, ಅಲ್ಲೂ ತನ್ನತನವನ್ನು ಬಿಟ್ಟುಕೊಡದೇ ಸ್ವಂತಿಕೆಯನ್ನು ಉಳಿಸಿಕೊಂಡವರು.

ಕಾಂಗ್ರೆಸ್‌ನಲ್ಲಿದ್ದಾಗ ಲೋಕಸಭಾ ಉಪಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಜಯಗಳಿಸಿದರೂ, ಮುಂದೆ ವಿಧಾನ ಪರಿಷತ್ ಚುನಾವಣೆಯ ಸಂದರ್ಭದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ 2015ರಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಬಳಿಕ ಬಿಜೆಪಿ ಪಕ್ಷ ಸೇರುವ ಮೂಲಕ ಅದುವರೆಗೆ ತಾನು ಅನುಸರಿಸಿದ ಜಾತ್ಯತೀತ ನಿಲುವಿಗೆ ಧಕ್ಕೆ ತಂದುಕೊಂಡರು. ಆದರೆ ಬಿಜೆಪಿಯಲ್ಲಿದ್ದಾಗಲೂ ಅವರು ಎಲ್ಲೂ ಕೋಮು ಧ್ವೇಷದ ಜ್ವಾಲೆ ತನ್ನನ್ನು ಸೋಕದಂತೆ ಎಚ್ಚರ ವಹಿಸಿದ್ದರು. ಹೀಗಾಗಿ ಅಲ್ಲೂ ಅವರಿಗೆ ಬಯಸಿದ ಸ್ಥಾನ ಸಿಗದೇ, ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಪಟ್ಟಕ್ಕೆ ನೇಮಕಗೊಂಡರು.

ಮಹತ್ವಾಕಾಂಕ್ಷಿ ರಾಜಕಾರಣಿಯೊಬ್ಬ ಕಣ್ಣೆತ್ತೆಯೂ ನೋಡದ ಹಿಂದುಳಿದ ಆಯೋಗದ ಅಧ್ಯಕ್ಷ ಪಟ್ಟವನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದ ಬಡ ಹಾಗೂ ಹಿಂದುಳಿದ ಸಮುದಾಯಗಳಿಗೆ ಅನುಕೂಲವಾಗುವ ವರದಿಗಳನ್ನು ತಯಾರಿಸಿ ಸರಕಾರಕ್ಕೆ ಒಪ್ಪಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕವೂ ಸ್ಥಾನದಲ್ಲಿ ಮುಂದುವರಿದು ಅವರ ಸೂಚನಯಂತೆ ಕಾಂತರಾಜ ವರದಿಯನ್ನು ಮರು ಪರಿಷ್ಕರಿಸಿ ಸರಕಾರಕ್ಕೆ ಒಪ್ಪಿಸಿ ಆಯೋಗದಿಂದ ಹೊರ ಬಂದಿದ್ದಾರೆ.

ಹಿಂದುಳಿದ ಆಯೋಗದ ಅವಧಿ ಮುಗಿದ ಬಳಿಕ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿ ಕಾಂಗ್ರೆಸ್‌ಗೆ ಮರು ಸೇರ್ಪಡೆ ಗೊಂಡಿರುವ ಜಯಪ್ರಕಾಶ್ ಹೆಗ್ಡೆ ಇದೀಗ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾ ಗಿದ್ದು, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಎದುರಿಸುತಿದ್ದಾರೆ.

1999 ಮತ್ತು 2004ರ ವಿಧಾನಸಭಾ ಚುನಾವಣೆಯಲ್ಲಿ ಬ್ರಹ್ಮಾವರ ಕ್ಷೇತ್ರದಿಂದ ತಾನು ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಜಯಭೇರಿ ಬಾರಿಸಿದಾಗ ಎರಡೂ ಬಾರಿಯೂ ಅವರು ಬಿಜೆಪಿ ಸ್ಪರ್ಧಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಆಗ ಅವರ ಎದುರಾಳಿಯಾಗಿದ್ದವರು ಕ್ರಮವಾಗಿ ಕಾಂಗ್ರೆಸ್‌ನ ಸರಳಾ ಕಾಂಚನ್ ಮತ್ತು ಪ್ರಮೋದ್ ಮಧ್ವರಾಜ್. ಇದೀಗ ಮೂರನೇ ಬಾರಿಗೆ ಇಬ್ಬರೂ ಪರಸ್ಪರ ಎದುರಾಳಿಗಳಾಗಿದ್ದು, ಈ ಬಾರಿ ಜಯಪ್ರಕಾಶ್ ಹೆಗ್ಡೆ ಮ್ಯಾಜಿಕ್ ಹೇಗೆ ಕೆಲಸ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪರಿಚಯ:

ನಿವೃತ್ತ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶರಾಗಿದ್ದ ದಿ.ಕೆ.ಚಂದ್ರಶೇಖರ್ ಹೆಗ್ಡೆಯವರ ಪುತ್ರರಾದ ಕೊರ್ಗಿ ಜಯಪ್ರಕಾಶ್ ಹೆಗ್ಡೆ ವೃತ್ತಿಯಲ್ಲಿ ವಕೀಲರು, ಪ್ರವೃತ್ತಿಯಲ್ಲಿ ರಾಜಕಾರಣಿ ಹಾಗೂ ಸಮಾಜ ಸೇವಕ. ಕುಂದಾಪುರ ತಾಲೂಕಿನ ಕೊರ್ಗಿಯಲ್ಲಿ 1952ರ ಅ.16ರಂದು ಜನಿಸಿದ ಹೆಗ್ಡೆ ಬಿ.ಎ.ಎಲ್‌ಎಲ್‌ಬಿ ಪದವೀಧರರು.

1972-78ರ ಅವಧಿಯಲ್ಲಿ ವಿಜಯ ಬ್ಯಾಂಕ್ ನೌಕರರ ಯೂನಿಯನ್‌ನ ಉಪಾಧ್ಯಕ್ಷರಾಗಿ ಬಳಿಕ ಅಧ್ಯಕ್ಷರಾಗಿ ದುಡಿದ ಜಯಪ್ರಕಾಶ್ ಹೆಗ್ಡೆ, ರಾಜಕೀಯವನ್ನು ಪ್ರವೇಶಿಸಿದ್ದು ಅಖಲ ಭಾರತ ಯುವ ಜನತಾದಳದ ಪ್ರದಾನ ಕಾರ್ಯದರ್ಶಿ ಯಾಗುವ ಮೂಲಕ. 1987ರಲ್ಲಿ ಸ್ಪೈನ್‌ನ ವೆಲೆನ್ಸಿಯಾದಲ್ಲಿ ನಡೆದ ಇಂಟರ್‌ನ್ಯಾಷನಲ್ ಯೂನಿಯನ್ ಆಫ್ ಸೋಷಿಯಲಿಸ್ಟ್ ಯೂತ್‌ನ ‘ಯುವಜನೋತ್ಸವ’ದಲ್ಲಿ ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದರು.

ಅದೇ ರೀತಿ ಯುವ ರಾಜಕೀಯ ನೇತಾರರ ಅಮೆರಿಕನ್ ಕೌನ್ಸಿಲ್ ಏರ್ಪಡಿಸಿದ ಪ್ರಜಾಪ್ರಭುತ್ವ ಸಮ್ಮೇಳನದಲ್ಲಿ ಹೆಗ್ಡೆ ಎರಡು ಬಾರಿ ಭಾರತವನ್ನು ಪ್ರತಿನಿಧಿಸಿದ್ದರು. ಒಮ್ಮೆ 1986ರ ಅಧ್ಯಕ್ಷೀಯ ಚುನಾವಣೆ ಸಂದರ್ಭ ಹಾಗೂ ಇನ್ನೊಮ್ಮೆ 1989ರ ಸೆನೆಟ್ ಚುನಾವಣೆಯ ಸಂದರ್ಭದಲ್ಲಿ. 1991ರಲ್ಲಿ ಬೆಂಗಳೂರಿನಲ್ಲಿ ನಡೆದ ಕಾಮನ್ವೆಲ್ತ್ ಯುವ ಕಾರ್ಯ ಕ್ರಮದಲ್ಲೂ ಅವರು ಭಾರತದ ಪ್ರತಿನಿಧಿಯಾಗಿದ್ದರು.

ಜನತಾದಳದ ಮೂಲಕ ರಾಜ್ಯದ ರಾಜಕೀಯ ರಂಗಕ್ಕೆ ಪ್ರವೇಶ ಪಡೆದ ಜಯಪ್ರಕಾಶ್ ಹೆಗ್ಡೆ, 1985 ಮತ್ತು 1989ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಬಿ.ಬಸವರಾಜ್ ಕೈಯಲ್ಲಿ ಸೋಲನನುಭ ವಿಸಿದ್ದರು. ಆದರೆ 1994ರಲ್ಲಿ ಬ್ರಹ್ಮಾವರ ಕ್ಷೇತ್ರದಲ್ಲೇ ಮೊದಲ ಬಾರಿ ಜಯಗಳಿಸುವ ಮೂಲಕ ರಾಜ್ಯ ವಿಧಾನಸಭೆಯನ್ನು ಪ್ರವೇಶಿಸಿದ್ದರು. ಮುಂದೆ ಅವರು ಬ್ರಹ್ಮಾವರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವವರೆಗೆ ಸತತ 11 ವರ್ಷ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

1994-99ರ ಅವಧಿಯಲ್ಲಿ ಅವರು ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿ ಜನಾನುರಾಗಿ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಸಂಪಾದಿಸಿದರು. 1999ರಲ್ಲಿ ಅವರು ಮತ್ತೆ ಇದೇ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದ್ದಲ್ಲದೇ 2004ರಲ್ಲಿ ನಡೆದ 12ನೇ ವಿಧಾನಸಭಾ ಚುನಾವಣೆಯಲ್ಲೂ ಸತತ ಮೂರನೇ ಬಾರಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದ್ದರು.

2008 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಂದಾಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಹಾಲಾಡಿ ಶ್ರೀನಿವಾಸ ಶೆಟ್ಟರ ಕೈಯಲ್ಲಿ ಸೋಲನನುಭವಿಸಿದರು. ಬಳಿಕ 2009ರ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ಅವರು ಡಿ.ವಿ.ಸದಾನಂದ ಗೌಡರಿಂದ ಕೇವಲ 27,018 ಮತಗಳಿಂದ ಸೋತರು. ಗೌಡರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರಿಂದ 2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಅವರು ಬಿಜೆಪಿಯ ಸುನಿಲ್‌ ಕುಮಾರ್‌ರನ್ನು ಭರ್ಜರಿಯಾಗಿ ಸೋಲಿಸಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರ ಎದುರಾಳಿಯಾಗಿ ಸೋಲನನುಭವಿಸಿದರು.

ಕ್ರೀಡಾಪ್ರೇಮಿಯಾಗಿರುವ ಹೆಗ್ಡೆ, ಬ್ರಹ್ಮಾವರದಲ್ಲಿ ಹಲವು ಕ್ರೀಡಾಕೂಟ ಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಮಾತ್ರವಲ್ಲದೇ, ಕ್ರಿಕೆಟ್ ಅಭಿಮಾನಿಯಾಗಿ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಶಿವಮೊಗ್ಗ ತಂಡದ ಮಾಲೀಕರು ಆಗಿದ್ದರು.

ಜಯಪ್ರಕಾಶ್ ಹೆಗ್ಡೆಯವರ ಪತ್ನಿ ಶೋಭಾ ಜೆ.ಹೆಗ್ಡೆ ಹಾಗೂ ಇಬ್ಬರು (ಪುತ್ರ ನಿಶಾಂತ್, ಪುತ್ರಿ ದಿವ್ಯಾ) ಮಕ್ಕಳಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *