day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮನಸಿನೊಳಗೊಂದು ಪಯಣ………. ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು……….. – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಮನಸಿನೊಳಗೊಂದು ಪಯಣ………. ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು………..

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಮನಸಿನೊಳಗೊಂದು ಪಯಣ……….
ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು………..

ಹೊರಗೆಲ್ಲೋ ಪ್ರವಾಸ,
ಇನ್ನೊಬ್ಬರ ವಿಮರ್ಶೆ,
ಬದುಕಿನ ಜಂಜಾಟ,
ಅಜ್ಞಾನ, ಅಸಹನೆ, ಅಹಂಕಾರ ಮುಂತಾದ ಕಾರಣಗಳಿಗಾಗಿ
ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ ಇರುವುದಿಲ್ಲ…..

ಕೆಲವೊಮ್ಮೆ ಸಮಯವಿದ್ದರು ಅದರ ಆಗಾಧತೆಗೆ ಅಂಜಿ ಅದರೊಳಗೆ ಪ್ರವೇಶಿಸಲು ಭಯ ಮತ್ತು ನಿರಾಸಕ್ತಿ ಮೂಡುತ್ತದೆ…..
ನಮ್ಮೊಳಗೆ ನಾವು ಪ್ರವೇಶಿಸದ ಬದುಕು ಒಂದು ರೀತಿಯಲ್ಲಿ ಅಪೂರ್ಣ…….
ನಮ್ಮೊಳಗೆ ನಾವು ಪ್ರವೇಶಿಸುವುದು ಹೇಗೆ ಮತ್ತು ಅಲ್ಲಿನ ಪಯಣ ಹೇಗೆ…….

ಸೃಷ್ಟಿ……
75 ಭಾಗ ನೀರು – 25 ಭಾಗ ಭೂಮಿ…….
ಆ ಭೂಮಿಯ ಮೇಲೆ ಗಾಳಿ ನೀರು ಬೆಳಕು ಬೆಟ್ಟ ಗುಡ್ಡ ಕಾಡು ನದಿ ಸರೋವರ ಚಿತ್ರ ವಿಚಿತ್ರ ಪ್ರಾಣಿಗಳು…..
ಅದರಲ್ಲೊಂದು ವೈಶಿಷ್ಟ್ಯದ ಪ್ರಾಣಿ ಎಂಬ ಮನುಷ್ಯ……
ಆ ಮನುಷ್ಯ ಪ್ರಾಣಿಯ ಬಣ್ಣದಲ್ಲಿ ಕಪ್ಪು ಬಿಳುಪು ಕಂದು ಎಂಬಿತ್ಯಾದಿ ಒಂದಷ್ಟು ವ್ಯತ್ಯಾಸಗಳು……
ಆ ವ್ಯತ್ಯಾಸಗಳಲ್ಲಿ ಈ ಪ್ರಾಣಿಯ ಆಚರಣೆಯಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಬೌದ್ದ ಸಿಖ್ ಜೈನ ಲಿಂಗಾಯತ ಪಾರ್ಸಿ ಇತ್ಯಾದಿ ಇತ್ಯಾದಿ ಭಿನ್ನತೆಗಳು…..

ಆ ಭಿನ್ನತೆಗಳಲ್ಲಿ ಅಮೆರಿಕ ಚೀನಾ ಆಫ್ರಿಕಾ ರಷ್ಯಾ ಆಸ್ಟ್ರೇಲಿಯಾ ಪಾಕಿಸ್ತಾನ ಭಾರತ ಶ್ರೀಲಂಕಾ ಮುಂತಾದ ಪ್ರದೇಶಗಳ ವಿಂಗಡನೆ…..

ಆ ವಿಂಗಡನೆಗಳಲ್ಲಿ ಕನ್ನಡ ತಮಿಳು ಹಿಂದಿ ಇಂಗ್ಲಿಷ್ ಫ್ರೆಂಚ್ ಸಂಸ್ಕೃತ ಮುಂತಾದ ಅನೇಕ ಭಾಷಾ ಪ್ರಬೇಧಗಳು….

ಆ ಪ್ರಬೇಧಗಳ ಮನುಷ್ಯ ಪ್ರಾಣಿಗಳಲ್ಲಿ ಅಸ್ಪೃಶ್ಯ ಬ್ರಾಹ್ಮಣ ಗೌಡ ಠಾಕೂರ್ ಯಾದವ್ ಜಾಟ್ ನಂಬೂದಿರಿ ಕಮ್ಮ ಪಟೇಲ ಎಂಬಿತ್ಯಾದಿ ಭೇದಗಳು……
ಆ ಭೇದಗಳಲ್ಲಿ ಬಡವ ಶ್ರೀಮಂತ ಮೇಲು ಕೀಳು ವಿದ್ಯಾವಂತ ಅನಕ್ಷರಸ್ಥ ಎಂಬ ತಾರತಮ್ಯಗಳು…..
ಆ ತಾರತಮ್ಯಗಳಲ್ಲಿ ಜವಾನ ಅಧಿಕಾರಿ ಮಂತ್ರಿ ಒಡೆಯ ಆಳು ಕೂಲಿ ಎಂಬ ವಿಭಾಗಗಳು……
ಆ ವಿಭಾಗಗಳಲ್ಲಿ ಅಪ್ಪ ಅಮ್ಮ ಅಜ್ಜ ಅಜ್ಜಿ ಗಂಡ ಹೆಂಡತಿ ಅತ್ತೆ ಸೊಸೆ ಮಕ್ಕಳು ಎಂಬ ಅನೇಕ ಸಂಬಂಧಗಳು……

ಆ ಸಂಬಂಧಗಳಲ್ಲಿ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ರಾಜಕೀಯ ಮುಂತಾದ ಅಸಮಾನತೆಗಳು….
ಆ ಅಸಮಾನತೆಗಳಲ್ಲಿ ನಮ್ಮ ಸ್ಥಾನಮಾನವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು…..
ಅಂದರೆ ಸೃಷ್ಟಿಯ ಮೂಲದಿಂದ ನಮ್ಮ ಯೋಚನಾ ಶಕ್ತಿ ರೂಪಗೊಳ್ಳಬೇಕು ಮತ್ತು ಪ್ರಾರಂಭವಾಗಬೇಕು……

ಮುಂದೆ….
ಇಷ್ಟು ಅರ್ಥಮಾಡಿಕೊಳ್ಳುವ ವೇಳೆಗಾಗಲೇ ಸೃಷ್ಟಿಯಲ್ಲಿ ನಮ್ಮ ‌ಅಸ್ತಿತ್ವದ ಒಂದು ಅಂದಾಜು, ಈ ಸಮಾಜ ಅಥವಾ ದೇಶದಲ್ಲಿ ಹಾಗು ಕೌಟುಂಬಿಕ ವ್ಯವಸ್ಥೆಯಲ್ಲಿ ನಮ್ಮ ಸ್ಥಾನಮಾನದ ಒಂದು ಚಿತ್ರಣ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ…..
ಆ ಮನಸ್ಸಿನ ಪ್ರವೇಶ ದ್ವಾರದ ಮೂಲಕ ಆತ್ಮದೊಳಗೆ ಹೆಜ್ಜೆ ಇಡಲು ಪ್ರಾರಂಭಿಸಿ….
ಇಲ್ಲಿಯವರೆಗಿನ ನಿಮ್ಮ ಅನುಭವ ಅಧ್ಯಯನ ಚಿಂತನೆ ಅರಿವು ಎಲ್ಲವನ್ನೂ ಒಟ್ಟುಗೂಡಿಸಿ ಒಂದೊಂದು ಹೆಜ್ಜೆ ಇಡುತ್ತಾ ಮುಕ್ತವಾಗಿ ಸಂಚರಿಸಿ……

ಹುಟ್ಟಿನಿಂದ ಸಾಯುವವರೆಗಿನ ಸಮಯ ಅಥವಾ ಕಾಲವನ್ನು ಮನುಷ್ಯ ಪ್ರಾಣಿಯ ಜೀವನ ಅಥವಾ ಬದುಕು ಎಂದು ಪರಿಗಣಿಸಲಾಗುತ್ತದೆ………

ಈ ಬದುಕಿನ ಪಯಣದ ಹಾದಿ, ಅರ್ಥ, ಉದ್ದೇಶ, ಗುರಿ, ಸಾರ್ಥಕತೆ, ಸೃಷ್ಟಿಯ ಸಹಜತೆ ಎಲ್ಲವನ್ನೂ ನಮ್ಮ ತಿಳಿವಳಿಕೆಯ ಮಿತಿಯಲ್ಲಿ, ನಾವು ಗ್ರಹಿಸಿದಂತೆ ನಮ್ಮೊಳಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಮ್ಮ ಜವಾಬ್ದಾರಿ, ಕರ್ತವ್ಯ ಯಾವುದು ಎಂದು ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ದೇಹ ಮತ್ತು ಮನಸ್ಸಿನ ಬೇಡಿಕೆ ಮತ್ತು ಪೂರೈಕೆಯ ಮಾರ್ಗಗಳನ್ನು ಗುರುತಿಸಿಕೊಳ್ಳಬೇಕು…..

ವೈಯಕ್ತಿಕತೆ, ಕೌಟುಂಬಿಕತೆ, ಸಾಮಾಜಿಕತೆ, ನೈತಿಕತೆ, ಮಾನವೀಯತೆ ಎಲ್ಲವನ್ನೂ ಸಮಗ್ರವಾಗಿ ಪರಿಶೀಲಿಸಿ ನಮ್ಮ ನಡೆಯನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು……

ಅತಿಮುಖ್ಯವಾಗಿ ಬದುಕಿನ ಏರಿಳಿತಗಳಲ್ಲಿ ನಮ್ಮ ಪ್ರತಿಕ್ರಿಯೆ ಮತ್ತು ‌ನಿಯಂತ್ರಣ ಮನಸ್ಸಿನೊಳಗಿನ ಪಯಣದಲ್ಲಿ ಮಹತ್ವ ಪಡೆಯಬೇಕಾದ ವಿಷಯ…..

ಏಕೆಂದರೆ, ಈ ಪಯಣದಲ್ಲಿ ನಮ್ಮ ಹುಡುಕಾಟ ನಮ್ಮೊಳಗಿನ ಅಂತಃ ಶಕ್ತಿಯನ್ನು ಉದ್ದೀಪನಗೊಳಿಸುವಂತಿರಬೇಕು. ಭವಿಷ್ಯದ ಕನಸುಗಳಿಗೆ ನೀರೆರೆಯುವಂತಿರಬೇಕು. ನಮ್ಮಲ್ಲಿರುವ ಕತ್ತಲನ್ನು ಕಳೆದು ಬೆಳಕು ಮೂಡುವಂತಿರಬೇಕು. ನಮ್ಮ ನೆಮ್ಮದಿಯ ಮಟ್ಟ ಹೆಚ್ಚುವಂತಿರಬೇಕು. ಒಟ್ಟಿನಲ್ಲಿ ಈ ಪಯಣ ನಮ್ಮಲ್ಲಿ ಸ್ಪೂರ್ತಿ ತುಂಬಿ ನಮ್ಮನ್ನು ಪುನಶ್ಚೇತನ ಗೊಳಿಸುವಂತಿರಬೇಕು. ನಮ್ಮಲ್ಲಿನ ಸಂಕುಚಿತತೆ ಕಡಿಮೆಯಾಗಿ ವಿಶಾಲ ಮನೋಭಾವ ಬೆಳೆಸುವಂತಿರಬೇಕು…….

ಏಕೆಂದರೆ, ಮನಸ್ಸೆಂಬುದು ರೀ ಚಾರ್ಜಬಲ್ ಬ್ಯಾಟರಿ ಇದ್ದಂತೆ. ಅದನ್ನು ಆಗಾಗ ರೀ ಚಾರ್ಜ್ ಮಾಡುತ್ತಲೇ ಇರಬೇಕು ಮತ್ತು ಅದನ್ನು ಹೊರಗಿನ ಮೂಲಗಳ ಜೊತೆಗೆ ಒಳಗಿನ ಸಂಪನ್ಮೂಲಗಳನ್ನು ಹೆಚ್ಚಾಗಿ ಬಳಸಿ ರೀ ಚಾರ್ಜ್ ಮಾಡಿದರೆ ಅದು ದೀರ್ಘ ಬಾಳಿಕೆ ಮತ್ತು ಹೆಚ್ಚು ದಕ್ಷತೆಯಿಂದ ಕ್ರಿಯಾತ್ಮಕವಾಗಿ ಕೆಲಸ ಮಾಡುತ್ತದೆ…..

ಅದಕ್ಕಾಗಿ ಆಗಾಗ ಅನಂತತೆಯೆಂಬ ಮನಸ್ಸಿನೊಳಗೆ ಸದಾ ಪಯಣಿಸುತ್ತಲೇ ಇರಬೇಕು. ಯಾರೋ ಯೋಗಿಗಳು, ಆಧ್ಯಾತ್ಮಿಕ ಗುರುಗಳು, ಸಾಧಕರು, ಋಷಿ ಮುನಿಗಳು ಮುಂತಾದವರು ಮಾತ್ರ ಮಾಡುವ ಮತ್ತು ಮಾಡಲು ಸಾಧ್ಯವಾಗುವ ವಿಷಯವಿದು. ಸಾಮಾನ್ಯ ಜನರಿಗೆ ಅಸಾಧ್ಯ ಎಂಬ ತಪ್ಪು ಕಲ್ಪನೆ ಮೂಡಿಸಲಾಗಿದೆ…..

ಎಲ್ಲಾ ಆರೋಗ್ಯವಂತ, ಸಹಜ, ಸಾಮಾನ್ಯ ವ್ಯಕ್ತಿಗಳು ಸಹ ತಮ್ಮ ಮನಸ್ಸಿನೊಳಗೆ, ತಮಗೆ ಸಾಧ್ಯವಿರುವ, ತಮ್ಮ ಮಿತಿಯಲ್ಲಿ ಸದಾ ಪ್ರಯಾಣಿಸಬಹುದು. ನೀವು ಸಹ ಸ್ವಚ್ಛಂದವಾಗಿ, ಮುಕ್ತವಾಗಿ ಪ್ರಯತ್ನಿಸಿ ನೋಡಿ. ಪರಿಣಾಮ – ಫಲಿತಾಂಶ ನಿಮ್ಮ ವಿವೇಚನೆಗೆ ಬಿಡುತ್ತಾ…,.

ಇದೊಂದು ದೀರ್ಘ ಮತ್ತು ನಿರಂತರ ಅಭ್ಯಾಸ. ಬದುಕಿನ ಕೊನೆಯ ಪುಟದವರೆಗೂ ನಡೆಯುತ್ತಲೇ ಇರಬೇಕು. ಆ ವ್ಯಕ್ತಿಯ ಜೀವನಮಟ್ಟ ಖಂಡಿತ ಸುಧಾರಣೆಯಾಗಿ Quality of Life ಉನ್ನತ ದರ್ಜೆಗೇರುವ ಎಲ್ಲಾ ಸಾಧ್ಯತೆ ಇದೆ ಎಂಬ ಭರವಸೆ ಮೂಡಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್.ಕೆ.
9844013068……

About Author

Leave a Reply

Your email address will not be published. Required fields are marked *