day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಚನ್ನಪಟ್ಟಣ ಉಪ ಚುನಾವಣೆ : ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿ..!? – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಚನ್ನಪಟ್ಟಣ ಉಪ ಚುನಾವಣೆ : ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿ..!?

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಚನ್ನಪಟ್ಟಣ ಉಪ ಚುನಾವಣೆ : ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿ..!?

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಶನಿವಾರ ರಾತ್ರಿ ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.

ತೀವ್ರ ಪೈಪೋಟಿ ಕಾರಣವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿಲ್ಲ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಇದ್ದು, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುವುದು ಖಚಿತವಾಗಿದೆ.

ಇನ್ನೂ ಶನಿವಾರ ಸಂಜೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಮುಖಂಡರ ಜೊತೆಗೆ ಮಾತುಕತೆ ನಡೆಸಿ, ಸಿಪಿ ಯೋಗೇಶ್ವರ್ ಅವರ ಮನವೊಲಿಕೆ ಮಾಡಲು ಯತ್ನಿಸಿದ್ದರು.

ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟಿದ್ದು: ಬಿಎಸ್‌ವೈ

ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು.ಬಿಜೆಪಿ ಜೆಡಿಎಸ್‌ ಒಟ್ಟಾಗಿ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ. ಸಿಪಿ ಯೋಗೇಶ್ವ‌ರ್ ಸ್ಪರ್ಧೆಯ ಬಗ್ಗೆ ದೆಹಲಿಯವರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿ ತೀರ್ಮಾನಿಸಲು ಆಗುವುದಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೋ ಅದರಂತೆ ಮಾಡುತ್ತೇವೆ. ಜೆಡಿಎಸ್‌ ಚಿಹ್ನೆಯ ಅಡಿ ಬಿಜೆಪಿಯವರು ಸ್ಪರ್ಧಿಸುವ ಯೋಚನೆ ಇಲ್ಲ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅವರು ಯಾರನ್ನು ಬೇಕಾದರೂ ನಿಲ್ಲಿಸಬಹುದು ಎಂದಿದ್ದಾರೆ.

ಯೋಗೇಶ್ವರ್‌ಗೆ ಕಾಂಗ್ರೆಸ್ ಗಾಳ:

ಮಾಜಿ ಸಚಿವ ಸಿಪಿ ಯೋಗೇಶ್ವರ ಅವರು ಚನ್ನಪಟ್ಟಣ ಉಪ ಚುನಾವಣೆಗೆ ಸ್ಫರ್ಧೆ ಮಾಡುವ ಅವಕಾಶ ಸಿಗುತ್ತದೆ ಎಂದು ಕಾಯುತ್ತಿದ್ದರು. ಆದರೆ, ಚುನಾವಣೆ ನಡೆಯುವ ಮೂರು ಕ್ಷೇತ್ರಗಳ ಪೈಕಿ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಉಪ ಚುನಾವಣೆ ವಿಚಾರವಾಗಿ ಮಾತನಾಡಿರುವ ಯಡಿಯೂರಪ್ಪ ಅವರು ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಸಿಪಿ ಯೋಗೇಶ್ವರ್ ಅವರ ಆಸೆಗೆ ತಣ್ಣೀರು ಎರಚಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಜೊತೆಗೆ ಈಗ ನಡೆಯುತ್ತಿರುವ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾಸ್ವಾಮಿ ಅವರನ್ನು ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸ್ಫರ್ಧೆ ಮಾಡಲು ತಯಾರಿ ನಡೆಸಿ ನಿರಾಸೆಗೊಂಡಿರುವ ಸಿಪಿವೈ ಅವರನ್ನು ಸಂಪರ್ಕಿಸಿದ ಜೆಡಿಎಸ್ ಮುಖಂಡರು ಜೆಡಿಎಸ್ ಚಿಹ್ನೆ ಅಡಿಯಲ್ಲಿ ಸ್ಫರ್ಧೆ ಮಾಡುವಂತೆ ಕೇಳಿದರು ಎನ್ನಲಾಗಿದೆ. ಜೆಡಿಎಸ್ ಪಕ್ಷವನ್ನು ನಂಬುವ ಸ್ಥಿತಿಯಲ್ಲಿಲ್ಲದ ಯೋಗೇಶ್ವರ್ ಅವರು ಬಹುತೇಕ ಬಂಡಾಯ ಅಭ್ಯರ್ಥಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಸಿಪಿವೈ ಅವರಿಗೆ ಗಾಳ ಹಾಕುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಕೈ ತಪ್ಪುವುದು ನಿಚ್ಚಳವಾಗಿದೆ. ಮೂಲಗಳ ಪ್ರಕಾರ ಯೋಗೇಶ್ವರ್ ಅವರು ಟಿಕೆಟ್ ಸಿಗದಿದ್ದರೂ ಅವರ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಸಿಪಿವೈ ಅವರ ಬಂಡಾಯವನ್ನು ಬಳಸಿಕೊಳ್ಳಲು ಯೋಜಿಸಿರುವ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುತ್ತದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಕಾಂಗ್ರೆಸ್ ಮೂಲದ ಸಿಪಿವೈ ಅವರು ಕಳೆದ 2008 ರಲ್ಲಿ ಅಪರೇಷನ್ ಕಮಲದ ಮೂಲಕ ಬಿಜೆಪಿ ಪಕ್ಷಕ್ಕೆ ಸೇರಿದ್ದರು, ನಂತರದ ದಿನಗಳಲ್ಲಿ ಅವರ ಗೆಲುವು ಮರೀಚಿಕೆಯಾಗಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷದಿಂದ ಅವಕಾಶ ಸಿಕ್ಕರೆ ಸ್ಫರ್ಧೆ ಖಚಿತ ಎಂಬ ಮಾತುಗಳೂ ಕೇಳಿಬರುತ್ತಿವೆ. ಯೋಗೇಶ್ವರ್ ಅವರ ಮುಂದಿನ ನಿಲುವೇನು ಎಂಬುದನ್ನು ಕಾದು ನೋಡಬೇಕಿದೆ.

About Author

Leave a Reply

Your email address will not be published. Required fields are marked *