ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಮೂವರು ಶಿಕ್ಷಕರು …
1 min read
ಚಿಕ್ಕಮಗಳೂರು ಫೆ 17, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಅನಿತಾ ಕೌಲ್ ಸ್ಮರಣಾರ್ಥ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಮೂವರು ಶಿಕ್ಷಕರು ಪಾತ್ರರಾಗಿದ್ದಾರೆ.

ಕಡೂರು ತಾಲೂಕು ರಾಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ. ಆರ್. ಜಗನ್ನಾಥಪ್ಪ, ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಡಿ. ಆರ್.ಬಾಗಿಬಾಯಿ ಹಾಗೂ ಮೂಡಿಗೆರೆ ತಾಲೂಕು ಬಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೆ.ಎಂ.ಇಂಪ ಪ್ರಶಸ್ತಿಗೆ ಭಾಜನರಾಗಿದ್ದು ಫೆ 22 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಧ್ಯಕ್ಷ ಮುಗಳಿಕಟ್ಟೆ ಲೋಕೇಶ್ ತಿಳಿಸಿದ್ದಾರೆ.

