day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆಗೆ ಜಿಲ್ಲಾಡಳಿತ ಸರ್ವ ಸನ್ನದ್ಧ- ಎಸ್.ಆರ್. ಉಮಾಶಂಕರ್ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆಗೆ ಜಿಲ್ಲಾಡಳಿತ ಸರ್ವ ಸನ್ನದ್ಧ- ಎಸ್.ಆರ್. ಉಮಾಶಂಕರ್ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಕೋವಿಡ್ 19 ಲಸಿಕೆ ವಿತರಣೆ ತಾಲೀಮು ಯಶಸ್ವಿ

ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆಗೆ ಜಿಲ್ಲಾಡಳಿತ ಸರ್ವ ಸನ್ನದ್ಧ- ಎಸ್.ಆರ್. ಉಮಾಶಂಕರ್

******

ದಾವಣಗೆರೆ ಜ. 08 (ಕರ್ನಾಟಕ ವಾರ್ತೆ):

ಕಳೆದ  10 ತಿಂಗಳಿನಿಂದಲೂ ಇಡೀ ಜಗತ್ತನ್ನು ಕಾಡುತ್ತಿರುವ ಕೋವಿಡ್-19 ವೈರಸ್ ಸೋಂಕು ರೋಗ  ನಿಯಂತ್ರಣಕ್ಕಾಗಿ ತಯಾರಿಸಲಾಗಿರುವ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ  ಕಾರ್ಯಕರ್ತರಿಗೆ ನೀಡಲು ಯೋಜಿಸಿದ್ದು, ಸರ್ಕಾರದ ನಿರ್ದೇಶನದಂತೆ ಇದಕ್ಕಾಗಿ ಜಿಲ್ಲೆಯ 06  ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ ವಿತರಣೆ ತಾಲೀಮು ಶುಕ್ರವಾರದಂದು ಯಶಸ್ವಿಯಾಗಿ  ನಡೆಸಲಾಯಿತು.

ದಾವಣಗೆರೆಯ ಬಾಷಾ ನಗರದ ನಗರ ಪ್ರಾಥಮಿಕ ಆರೋಗ್ಯ ಸಂಸ್ಥೆಯಲ್ಲಿ  ನೈಜ ಲಸಿಕೆ ವಿತರಣೆ ಹೊರತುಪಡಿಸಿ, ಲಸಿಕೆ ವಿತರಣೆಯ ಉಳಿದೆಲ್ಲ ಪ್ರಕ್ರಿಯೆಗಳ ತಾಲೀಮು  ಶುಕ್ರವಾರದಂದು ವ್ಯವಸ್ಥಿತವಾಗಿ ಜರುಗಿತು.  ಈ ವೇಳೆ ದಾಖಲೆ ಪರಿಶೀಲನೆ, ಲಸಿಕೆ ಸಂಗ್ರಹ  ವ್ಯವಸ್ಥೆ, ಸಂಗ್ರಹಗಾರದಿಂದ ಲಸಿಕೆ ಕೇಂದ್ರಕ್ಕೆ ಸಾಗಾಣಿಕೆ, ಲಸಿಕೆ ಪಡೆಯುವವರಿಗೆ  ಅಣುಕು ಲಸಿಕೆ ನೀಡಿಕೆ ನಡೆಯಿತು.  ಇಲ್ಲಿನ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ದೀಪಾ ಎ  ಅವರಿಗೆ ಕೋವಿಡ್ ಲಸಿಕೆಯ ತಾಲೀಮು ನಡೆಸಿ, ಅವರ ಮೊಬೈಲ್ ಸಂಖ್ಯೆಯ ದಾಖಲು, ಬಳಿಕ  ಮೊಬೈಲ್‍ಗೆ ಒಟಿಪಿ ಕಳುಹಿಸಿ, ಒಟಿಪಿ ಆಧಾರದಲ್ಲಿ ಮಾಹಿತಿ ದಾಖಲಿಸಿ, ಕೋವಿಡ್ ಲಸಿಕೆ  ಮೊದಲ ಡೋಸ್ ವಿತರಣೆಯ ಅಣುಕು ತಾಲೀಮು ನಡೆಸಲಾಯಿತು.  ಬಳಿಕ ನಿಗಾವಣೆ ಕೊಠಡಿಯಲ್ಲಿ 30  ನಿಮಿಷಗಳ ಕಾಲ ನಿಗಾದಲ್ಲಿರಿಸಿ, ಲಸಿಕೆ ಪಡೆದ ಬಳಿಕ ಕೈಗೊಳ್ಳಬೇಕಾದ ಮುಂಜಾಗ್ರತಾ  ಕ್ರಮಗಳ ಕುರಿತ ಕರಪತ್ರ ನೀಡಿಕೆ.  28 ದಿನಗಳ ಬಳಿಕ ಎರಡನೆÉ ಡೋಸ್ ಪಡೆಯಲು  ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ತಾಲೀಮು ಕೂಡ ನಡೆಸಲಾಯಿತು.  ಈ ವೇಳೆ  ಆರೋಗ್ಯ ಅಧಿಕಾರಿಗಳು, ವೈದ್ಯರು, ಲಸಿಕೆ ನೀಡುವ ಸಿಬ್ಬಂದಿ, ಶುಶ್ರೂಷಕರು, ಸಹಾಯಕ  ಸಿಬ್ಬಂದಿ, ಭದ್ರತಾ ಸಿಬ್ಬಂದಿ, ಲಸಿಕೆ ದಾಸ್ತಾನು, ಸುರಕ್ಷತೆ ಗಮನಿಸುವುದು,  ಲಸಿಕೆ  ಪಡೆಯಲು ಒಳ ಬರಲು ಮತ್ತು ಹೊರ ಹೋಗಲು ಪ್ರತ್ಯೇಕ ಬಾಗಿಲು, ನಿಗಾವಣೆ ಕೊಠಡಿ ವ್ಯವಸ್ಥೆಯ  ಪರಿಶೀಲನೆ ನಡೆಸಲಾಯಿತು.

ಲಸಿಕೆ ವಿತರಣೆ ಡ್ರೈರನ್ ವ್ಯವಸ್ಥೆಯನ್ನು  ಪರಿಶೀಲಿಸಲು ಬಾಷಾ ನಗರದ ನಗರ ಪ್ರಾಥಮಿಕ ಆರೋಗ್ಯಕ್ಕೆ ಜಿಲ್ಲಾ ಉಸ್ತುವಾರಿ  ಕಾರ್ಯದರ್ಶಿಯಾಗಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ  ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಖುದ್ದು  ಭೇಟಿ ನೀಡಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author